ಉತ್ತರಾಖಂಡದ ಸಿತಾರ್ ಗಂಜ್ ನಲ್ಲಿ ಶಾಲಾ ಬಸ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಇಬ್ಬರು ಮೃತಪಟ್ಟು 30 ಮಂದಿ ಗಾಯಗೊಂಡಿದ್ದು, 22 ಮಂದಿಯ ಸ್ಥಿತಿ ಗಂಭೀರವಾಗಿದೆ.
ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್‌ನಿಕ್‌ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಸಿತಾರ್ ಗಂಜ್ ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ.
14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತದಲ್ಲಿ ಅಸು ನೀಗಿದ್ದಾರೆ. ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ. ಅಪಘಾತಗೊಂಡ ಬಸ್‌ನಲ್ಲಿ 51 ಮಂದಿ ಇದ್ದರು.
ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz