ಶಿವಮೊಗ್ಗ: ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಖಾಸಗಿ ಶಾಲಾ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾಗಿದೆ.
ಗಾಯಾಳು ಮಕ್ಕಳಿಗೆ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


