ಅಪ್ರಾಪ್ತ ಶಾಲಾ ಬಾಲಕಿಯೊಬ್ಬಳು ತಂದೆಯನ್ನು ಹಿಂದೆ ಕೂರಿಸಿಕೊಂಡು ಸ್ಕೂಟರ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಔರಂಗಬಾದ್ ಇನಸೈಡರ್ ಎಂಬ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದೆ. ಇಂತಹವುಗಳು ನಿಜವಾಗಿಯೂ ಸ್ವೀಕಾರರ್ಹವೇ ? ಛತ್ರಪತಿ ಶಂಭಾಜಿನಗರದ ಶಾಕಿಂಗ್ ದೃಶ್ಯಾವಳಿ ಇದು ಎಂದು ಬರೆದು ವೀಡಿಯೋ ಪೋಸ್ಟ್ ಮಾಡಲಾಗಿದೆ.
ವೀಡಿಯೋದಲ್ಲಿ ಅಪ್ಪ ಮಗಳನ್ನು ಮುಂದೆ ಕೂರಿಸಿಕೊಂಡು ತಲೆಗೆ ಹೆಲ್ಮೆಟ್ ಕೂಡ ಹಾಕದೇ ಸ್ಕೂಟರ್ ಓಡಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋ ನೋಡಿದ ಅನೇಕರು, ತಂದೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗುವಿನ ಮೇಲೆ ಆಕ್ರೋಶ ಬೇಡ ಪೋಷಕರು ಜವಾಬ್ದಾರಿಯುತವಾಗಿರಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಹಲವು ಅಪಘಾತಗಳಿಗೆ ಇದು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296