ಕಲಬುರ್ಗಿ: ಶಾಲೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಲ್ಲಿ ನಡೆದಿದೆ.
ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55) ಮೃತಪಟ್ಟವರು ಎಂದು ವರದಿಯಾಗಿದೆ. ಶಿಕ್ಷಕರಿಬ್ಬರು ಶಾಲೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಿಮೆಂಟ್ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಶಿಕ್ಷಕರು ಕೂಡ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಮುಂದಿನ ಕ್ರಮಕೈಗೊಂಡಿದ್ದು, ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700