nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026
    Facebook Twitter Instagram
    ಟ್ರೆಂಡಿಂಗ್
    • ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
    • ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
    • ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
    • ಜ.27ರಂದು ಸವಿತಾ ಮಹರ್ಷಿ ಜಯಂತಿ
    • ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
    • ‘ಲ್ಯಾಂಡ್‌ ಲಾರ್ಡ್’ ಸಿನಿಮಾ ಬಿಡುಗಡೆ: ಆಟೋ ಚಾಲಕರಿಂದ ಸಂಭ್ರಮ
    • ಫೆ.22ರಿಂದ ಗುಬ್ಬಿಯಪ್ಪ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ
    • ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ವಿಶೇಷ ಪೂಜಾ ಮಹೋತ್ಸವ, ಪಲ್ಲಕ್ಕಿ ಉತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ: ದತ್ತಾಂಶ ಸಂಗ್ರಹಕ್ಕಾಗಿ ಮೇ 5ರಿಂದ ಮನೆ–ಮನೆ ಸಮೀಕ್ಷೆ
    ತುಮಕೂರು April 25, 2025

    ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ: ದತ್ತಾಂಶ ಸಂಗ್ರಹಕ್ಕಾಗಿ ಮೇ 5ರಿಂದ ಮನೆ–ಮನೆ ಸಮೀಕ್ಷೆ

    By adminApril 25, 2025No Comments2 Mins Read
    shubha kalyan

    ತುಮಕೂರು:  ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ದತ್ತಾಂಶ ಸಂಗ್ರಹಕ್ಕಾಗಿ ಜಿಲ್ಲೆಯಲ್ಲಿ ಮೇ 5 ರಿಂದ ಮನೆ-ಮನೆ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ವಿಕಾಸ ಸೌಧದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ನಡೆಸಿದ ವಿಡಿಯೋ ಸಂವಾದದ ಸಭೆಯ ನಂತರ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ, ಮನೆ–ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಗಣತಿದಾರರನ್ನಾಗಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುವುದು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಸರ್ಕಾರ ನಿರ್ದೇಶನ ನೀಡಿದೆ. ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ ಗಣತಿದಾರರು ಕರಾರುವಾಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಸೂಚಿಸಿದರು.


    Provided by
    Provided by

    3 ಹಂತದಲ್ಲಿ ಸಮೀಕ್ಷೆ:

    ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಸರ್ಕಾರದ ಆದೇಶದಂತೆ ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿ 3 ಹಂತದಲ್ಲಿ ನಡೆಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17ರವರೆಗೆ ಗಣತಿದಾರರು ಮನೆ-ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ನಂತರ 2ನೇ ಹಂತದಲ್ಲಿ ಮೇ 19 ರಿಂದ 21ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಹಾಗೂ 3ನೇ ಹಂತದಲ್ಲಿ ಮೇ 19 ರಿಂದ ಮೇ 23ರವರೆಗೆ ಆನ್‌ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

    ಸಮೀಕ್ಷೆಯ 2ನೇ ಹಂತದಲ್ಲಿ ಪ.ಜಾತಿ ಸಮುದಾಯದವರು ಮತಗಟ್ಟೆ ಪ್ರದೇಶದಲ್ಲಿ ಗುರುತಿಸಿರುವ ವಿಶೇಷ ಶಿಬಿರಗಳಿಗೆ ತೆರಳಿ ತಮ್ಮ ಜಾತಿ ಕುರಿತು ಗಣತಿದಾರರಿಗೆ ಮಾಹಿತಿ ನೀಡಲು ಮೇ 19 ರಿಂದ 21ರವರೆಗೆ ಅವಕಾಶ ಕಲ್ಪಿಸಲಾಗುವುದು. ಮನೆ–ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದವರು 3ನೇ ಹಂತದಲ್ಲಿ ಮೇ 19 ರಿಂದ 23ರವರೆಗೆ ಆಧಾರ್ ನಂಬರ್ ಮತ್ತು ಆರ್.ಡಿ. ನಂಬರ್‌ ನೊಂದಿಗೆ ಆನ್‌ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

    ಸಮೀಕ್ಷೆ ಕಾರ್ಯಕ್ಕಾಗಿ ಮಾಸ್ಟರ್ ಟ್ರೈನರ್‌ ಗಳಿಂದ ಏಪ್ರಿಲ್ 28ರಂದು ಜಿಲ್ಲಾ ಮಟ್ಟದ ತರಬೇತಿ ಹಾಗೂ ಏಪ್ರಿಲ್ 29 ಮತ್ತು 30ರಂದು ತಾಲ್ಲೂಕು/ ಪಾಲಿಕೆ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

    ಗಣತಿದಾರರಿಗೆ ಸಹಕರಿಸಲು ಮನವಿ:

    ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ಸಮೀಕ್ಷೆಗಾಗಿ ಮನೆ-ಮನೆ ಭೇಟಿ ನೀಡುವ ಗಣತಿದಾರರಿಗೆ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ನಿರ್ಧಿಷ್ಟವಾದ ಉಪಜಾತಿಯ ವಿವರವನ್ನು ನೀಡಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ಮಾತನಾಡಿ ಸಮೀಕ್ಷೆ ಕಾರ್ಯಕ್ಕೆ ಕೌಶಲ್ಯವುಳ್ಳ ಮಾಸ್ಟರ್ ಟ್ರೈನರ್‌ಗಳನ್ನು ನೇಮಕ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಪ.ಜಾತಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳ ಸಮೀಕ್ಷೆಗೆ ಹೆಚ್ಚಿನ ಗಣತಿದಾರರನ್ನು ನಿಯೋಜಿಸಬೇಕು ಎಂದು ಸಲಹೆ ನೀಡಿದರು.

    ಸಭೆಯಲ್ಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಉಪ ವಿಭಾಗಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ ಹಾಗೂ ಸಪ್ತಶ್ರೀ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

    January 24, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ತುರುವೇಕೆರೆ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ತುರುವೇಕೆರೆ ಘಟಕದ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ…

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.