ಮೈಸೂರು : ಹರಕೆಗೆ ಬಿಟ್ಟ ಹೋರಿಯ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿಯ ಹಳ್ಳದಕೆರೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹರಕೆ ಹೋರಿಯ ಕೂಗು ಕೇಳಿ ಸ್ಥಳೀಯರು ಪಶುವೈದ್ಯರಿಗೆ ಮಾಹಿತಿ ನೀಡಿದಾಗ, ದುಷ್ಕರ್ಮಿಗಳು ಅದರ ಬಾಲವನ್ನು ಕತ್ತರಿಸಿ ಗಾಯಗೊಳಿಸಿರುವುದನ್ನು ಕಂಡುಬಂದಿದೆ. ಹೋರಿ ಅಪಾಯದಿಂದ ಪಾರಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx