ಗುಬ್ಬಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುಬ್ಬಿ ತಾಲ್ಲೂಕು ಕಲ್ಲೂರು ಗ್ರಾಮದಲ್ಲಿ ಇಂದು SCS ಸಾಮಾನ್ಯ ಸೇವಾ ಕೇಂದ್ರವನ್ನು ಸಮಾಜ ಸೇವಕರಾದ ಜೈ ಮಾರುತಿ ಮೆಡಿಕಲ್ ಮಾಲೀಕ ಕೆ.ಟಿ.ಸೋಮಶೇಖರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಭಾಗಕ್ಕೆ ನೀಡುತ್ತಿರುವುದು ಪ್ರಶಂಸನಿಯವಾಗಿದೆ. ಹೀಗೆ ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ, ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದೆ. ಇದೀಗಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿದ್ದಾರೆ. ಸ್ಥಳೀಯ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕ ಗ್ರಾಮಸ್ಥರು ಈ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಅವರು ಸಲಹೆ ನೀಡಿದರು
ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ರೇಣುಕಾ, ಸೇವಾ ಪ್ರತಿನಿಧಿ ನೇತ್ರಾವತಿ, ಸೇವಾಕೇಂದ್ರದ ನಿರ್ವಾಕರಾದ ರಂಜಿತ ಆನಂದ್, ಸದಸ್ಯರುಗಳಾದ ಉಷಾ, ಹೇಮಾವತಿ, ಹಾಗೂ ಒಕ್ಕೂಟದ ಅಧ್ಯಕ್ಷರಾದ ಮಂಜುಳ ಹಾಗೂ ಸದಸ್ಯರುಗಳಾದ ಸುರೇಶ್ ಇನ್ನಿತರರು ಹಾಜರಿದ್ದರು.
ವರದಿ: ಯತೀಶ್ ಕುಮಾರ್, ತುಮಕೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy