ಬೆಂಗಳೂರು: 1323 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.
1,122 ಹಾಗೂ ಹೈದರಾಬಾದ್ ಕರ್ನಾಟಕದ 201 ಸೇರಿ ಒಟ್ಟು 1,323 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಆಯ್ಕೆ ಪಟ್ಟಿ ಹಾಗೂ ಕಟ್ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ.
2020ರ ಮೇ 14ರಂದು ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕಳೆದ ನವೆಂಬರ್ 25ರಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಗೊಳಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.