ದಕ್ಷಿಣಕನ್ನಡ: ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ (66) ಅನಾರೋಗ್ಯದಿಂದ ತಡರಾತ್ರಿ ಸಿಂಗಪುರದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರಕ್ಕೆ ಚಿಕಿತ್ಸೆಗೆ ತೆರಳಿದ್ದರು. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷಗಳ ಕಾಲ ಡಾ.ಯಶೋವರ್ಮ ಸೇವೆ ಸಲ್ಲಿಸಿದ್ದರು.
ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಮೃತರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆಯವರ ಸಹೋದರರಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5