ಬೆಂಗಳೂರು: ಎಸ್ ಡಿ ಪಿ ಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದೆ. ಈ ಸಂಘಟನೆ ಕಾಂಗ್ರೆಸ್, ಕಮ್ಯೂನಿಸ್ಟರು ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಕೇಸ್ ಗಳನ್ನು ವಜಾ ಮಾಡಿದ್ದರು ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಆರ್.ಎಸ್.ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಪ್ರಹ್ಲಾದ್ ಜೋಶಿ, ಆರ್.ಎಸ್.ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


