ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಹೇಳಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಫಲಿತಾಂಶವನ್ನು ನೋಡುವುದು ಹೇಗೆ? ದ್ವಿತೀಯ PUC ಫಲಿತಾಂಶಗಳು https://karresults.nic.in/ ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.
ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ. ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ) ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


