nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    ರಾಜ್ಯ ಸುದ್ದಿ April 9, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    By adminApril 9, 2026No Comments1 Min Read
    exam results

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 9) ಅಧಿಕೃತವಾಗಿ ಪ್ರಕಟಿಸಲಿದೆ. ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

    ಫಲಿತಾಂಶದ ಸಮಯ ಮತ್ತು ವೆಬ್‌ಸೈಟ್:

    ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ಸಂಜೆ 5:00 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಫಲಿತಾಂಶ ವೀಕ್ಷಿಸಲು ಅಧಿಕೃತ ಲಿಂಕ್‌ ಗಳು:

    karresults.nic.in

    kseab.karnataka.gov.in

    ಅಂಕಪಟ್ಟಿ ಡೌನ್‌ಲೋಡ್ ಮಾಡುವ ವಿಧಾನ:

    ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.

    ಮುಖಪುಟದಲ್ಲಿ ಕಾಣುವ ‘2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

    ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ವಿಷಯದ ಗುಂಪನ್ನು (Science/Arts/Commerce) ಆಯ್ಕೆ ಮಾಡಿ.

    ‘Submit’ ಬಟನ್ ಒತ್ತಿದಾಗ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.

    ಭವಿಷ್ಯದ ಬಳಕೆಗಾಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

    ಅಂಕ ಸುಧಾರಣೆಗೆ ಮತ್ತೊಂದು ಅವಕಾಶ:

    ಈ ಬಾರಿ ನಿರೀಕ್ಷಿತ ಅಂಕ ಬಾರದ ವಿದ್ಯಾರ್ಥಿಗಳು ಚಿಂತಿಸಬೇಕಿಲ್ಲ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯಡಿ (Exam 1, 2, & 3), ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಪರೀಕ್ಷೆ-2 ಮತ್ತು ಪರೀಕ್ಷೆ-3 ರಲ್ಲಿ ಭಾಗವಹಿಸಬಹುದು. ಒಂದು ವೇಳೆ ಪರೀಕ್ಷೆ-2 ರ ಫಲಿತಾಂಶ ತೃಪ್ತಿ ನೀಡದಿದ್ದರೆ, ಜೂನ್ 2026 ರಲ್ಲಿ ನಡೆಯುವ ಪರೀಕ್ಷೆ-3 ಕ್ಕೆ ಹಾಜರಾಗಲು ಅವಕಾಶವಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.