ಬೆಂಗಳೂರು: ಇಂದಿನಿಂದ 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭಗೊಂಡಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,050 ಪದವಿ ಪೂರ್ವ ಕಾಲೇಜುಗಳ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4