ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಜ್ಜಾಗಿದೆ. ಏಪ್ರಿಲ್ 9ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರಬೀಳಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ಗಳ ಜೊತೆಗೆ ಈಗ ಡಿಜಿಲಾಕರ್ (DigiLocker) ಮೂಲಕವೂ ತಮ್ಮ ಅಧಿಕೃತ ಅಂಕಪಟ್ಟಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.
ಆನ್ ಲೈನ್ ನಲ್ಲಿ ಲಭ್ಯವಾಗುವ ಫಲಿತಾಂಶವು ತಾತ್ಕಾಲಿಕವಾಗಿದ್ದು, ಉನ್ನತ ಶಿಕ್ಷಣದ ಪ್ರವೇಶಾತಿಗಾಗಿ ಡಿಜಿಲಾಕರ್ನಲ್ಲಿ ಲಭ್ಯವಿರುವ ಡಿಜಿಟಲ್ ಅಂಕಪಟ್ಟಿ ಅಧಿಕೃತ ದಾಖಲೆಯಾಗಿ ಕಾರ್ಯನಿರ್ವಹಿಸಲಿದೆ.
ಡಿಜಿಲಾಕರ್ ಮೂಲಕ ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ?ವಿದ್ಯಾರ್ಥಿಗಳು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು:
ಮೊಬೈಲ್ ಆ್ಯಪ್ ಅಥವಾ ವೆಬ್ಸೈಟ್: ಮೊದಲು ನಿಮ್ಮ ಮೊಬೈಲ್ನಲ್ಲಿ ‘DigiLocker’ ಆ್ಯಪ್ ಡೌನ್ಲೋಡ್ ಮಾಡಿ ಅಥವಾ digilocker.gov.in ವೆಬ್ ಸೈಟ್ ಗೆ ಭೇಟಿ ನೀಡಿ. ನಿಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ಬಳಸಿ ಲಾಗಿನ್ ಆಗಿ. ಖಾತೆ ಇಲ್ಲದಿದ್ದರೆ ಹೊಸದಾಗಿ ನೋಂದಣಿ ಮಾಡಿ. ಸರ್ಚ್ ಆಯ್ಕೆ: ಲಾಗಿನ್ ಆದ ನಂತರ ‘Search Documents’ ವಿಭಾಗಕ್ಕೆ ಹೋಗಿ. ಅಲ್ಲಿ ‘Karnataka School Examination and Assessment Board’ (KSEAB) ಎಂದು ಹುಡುಕಿ ಮತ್ತು ಅದನ್ನು ಆಯ್ಕೆ ಮಾಡಿ.
ನಂತರ ‘Class XII Marksheet’ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ವಿವರಗಳನ್ನು ಭರ್ತಿ ಮಾಡಿ: ನಿಮ್ಮ ರಿಜಿಸ್ಟರ್ ಸಂಖ್ಯೆ (Registration Number) ಮತ್ತು ಪರೀಕ್ಷೆ ಬರೆದ ವರ್ಷವನ್ನು ನಮೂದಿಸಿ. ‘Get Document’ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ. ಸೇವ್ ಮಾಡಿ: ಇದನ್ನು ನಿಮ್ಮ ಡಿಜಿಲಾಕರ್ ಖಾತೆಯಲ್ಲಿ ಸೇವ್ ಮಾಡಿಕೊಳ್ಳಬಹುದು ಅಥವಾ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.
ಫಲಿತಾಂಶ ನೋಡಲು ಅಧಿಕೃತ ವೆಬ್ ಸೈಟ್ಗಳು: ವಿದ್ಯಾರ್ಥಿಗಳು ಮಧ್ಯಾಹ್ನ 3 ಗಂಟೆಯ ನಂತರ ಈ ಕೆಳಗಿನ ವೆಬ್ ಸೈಟ್ ಗಳಲ್ಲೂ ತಮ್ಮ ಅಂಕಗಳನ್ನು ಪರಿಶೀಲಿಸಬಹುದು:
ಗಮನಿಸಿ: ಈ ಬಾರಿ ಮಂಡಳಿಯು ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ 30% ಮತ್ತು ಒಟ್ಟಾರೆಯಾಗಿ 33% ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


