ಇಂದು ದ್ವಿತೀಯ ಪಿಯುಸಿ 2024 ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದ್ದು, 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದು.
ಫಲಿತಾಂಶ ಚೆಕ್ ಮಾಡುವ ರೀತಿ ಇಲ್ಲಿದೆ:
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನೀಡಲಾದ ರಿಜಿಸ್ಟರ್ ನಂಬರ್/ರೋಲ್ ನಂಬರ್ ಬಳಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡುವ ವೆಬ್ಸೈಟ್ನಲ್ಲಿ ಫಲಿತಾಂಶ ಚೆಕ್ ಮಾಡಬಹುದು.
ಚೆಕ್ ಮಾಡುವ ರೀತಿ ಇಲ್ಲಿದೆ:
ವಿದ್ಯಾರ್ಥಿಗಳು ಮೊದಲಿಗೆ https://karresults.nic.in/ ಗೆ ಭೇಟಿ ನೀಡಿ, ನಂತರ ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡುವ ಲಿಂಕ್ ಇರುತ್ತದೆ. ಅದಕ್ಕೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಬೇಕು. ಆವಾಗ ನಿಮ್ಮ ಫಲಿತಾಂಶ ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296