ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿದ್ದ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿದೆ. ವ್ಯಕ್ತಿಯೊಬ್ಬ ವೇದಿಕೆಗೆ ನುಗ್ಗಿ ಬಂದು ಶಾಲನ್ನು ವೇದಿಕೆಗೆ ಎಸೆದ ಘಟನೆ ನಡೆದಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ವೇದಿಕೆಗೆ ಜಂಪ್ ಮಾಡಿದ್ದಾನೆ. ಶಾಲುಗಳನ್ನು ಹಾಕಿಕೊಂಡಿದ್ದ ವ್ಯಕ್ತಿ ಏಕಾಏಕಿ ವೇದಿಕೆಗೆ ನುಗ್ಗಿ ಬಂದಿದ್ದಾನೆ.
ಈ ವೇಳೆ ಎಚ್ಚೆತ್ತ ಭದ್ರತಾ ಸಿಬ್ಬಂದಿ, ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಯುವಕ ತನ್ನ ಬಳಿ ಇದ್ದ ಶಾಲನ್ನು ತೆಗೆದು ಸಿಎಂ ಅತ್ತ ಎಸೆದು ಹೈಡ್ರಾಮ ಮಾಡಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


