ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ , ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ.
ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ.
ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4