ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ನೀಡುವ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕಾಗಿ ಆಯ್ಕೆ ಸಮಿತಿ ಮೂಲಕ ಆಯ್ಕೆಯಾದ ಫಲಾಪೇಕ್ಷಿಗಳು ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.
ಸೌಲಭ್ಯಕ್ಕೆ ಸಂಬಂಧಿಸಿದಂತೆ ಫಲಾಪೇಕ್ಷಿಗಳು ಮಧ್ಯವರ್ತಿಗಳಿಂದ ಮೋಸ ಹೋದಲ್ಲಿ ನಿಗಮ ಜವಾಬ್ದಾರಿಯಾಗುವುದಿಲ್ಲ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಖುದ್ದಾಗಿ ಕಚೇರಿಯ ಅಧಿಕಾರಿ/ಸಿಬ್ಬಂದಿಗಳನ್ನು ಭೇಟಿ ಮಾಡಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


