ತುಮಕೂರು: ಬೆಂಗಳೂರಿನ ನಿಮ್ಹಾನ್ಸ್ ಎಪಿಡೀಮಿಯಾಲಜಿ ವಿಭಾಗದ ಜನ ಆರೋಗ್ಯ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಟಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಶಿರಾ, ಗುಬ್ಬಿ ಹಾಗೂ ಕುಣಿಗಲ್ ತಾಲ್ಲೂಕುಗಳಿಗೆ ಯುವ ಪರಿವರ್ತಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು ಪದವಿ ಹೊಂದಿದ್ದು, 21 ರಿಂದ 35 ವರ್ಷದೊಳಗಿನವರಾಗಿರಬೇಕು.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 10ರೊಳಗಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8549890509/ 9353321355ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW