ತುಮಕೂರು: ಫೇಕ್ ನೋಟಿಸ್ ಎಂದು ಹೇಳುತ್ತಿರುವ ಬಿಜೆಪಿಯ ಕೆಲ ನಾಯಕರು ಹೇಳುತ್ತಿರುವುದರಲ್ಲಿ ಅರ್ಥವಿದೆಯೇ? ನಿನ್ನೆ ವಿಜಯೇಂದ್ರ ಸಹಿ ಮಾಡಿರುವುದು ಫೇಕ್ ನೋಟಿಸ್ ಗೆ ಎಂದು ಹೇಳುತ್ತಿರುವುದು ಮತ್ತು ಸಹಿ ಮಾಡುವುದು ಹುಡುಗಾಟವೇ ಅನಗತ್ಯವಾಗಿ ಮಾತನಾಡಬಾರದು ಎಂದು ಬಿಜೆಪಿ ಮುಖಂಡ ರೇಣುಕಾಚಾಯ ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರಿನ ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪತ್ರಕತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಕಣ್ಣೀರು ಹಾಕಿದ್ದಾರೆ. ಅವರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಶಾಸಕರು, ಮತ್ತು ಸಚಿರಾಗಿದ್ದೆವು. ಅನಗತ್ಯವಾದ ಟೀಕೆಗೆ ಜಗ್ಗಲ್ಲ ಬಗ್ಗಲ್ಲ, ವಿಜಯೇಂದ್ರ ನೇತೃತ್ವದಲ್ಲಿ ನಾವು ಚುನಾವಣೆಗೆ ಹೋಗುತ್ತೇವೆ ಎಂದರು.
2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಬೇಕಿದೆ. ಅನಗತ್ಯವಾಗಿ ಯಡಿಯೂರಪ್ಪ ಮತ್ತು ವಿಜೇಂದ್ರ ವಿರುದ್ಧ ಟೀಕೆ ಮಾಡಿದರೆ ದೊಡ್ಡವರಾಗುತ್ತೇವೆ ಎಂದು ಕೊಂಡಿದ್ದಾರೆ ಎಂದು ಟೀಕಿಸಿದರು.
ಕುಮಾರಬಂಗಾರಪ್ಪ ಅವರನ್ನು ರಾಜಕೀಯವಾಗಿ ಪುನರ್ ವಸತಿ ತಂದು ಕೊಟ್ಟದ್ದು ಯಡಿಯೂರಪ್ಪ ಅವರು, ವಿಜೇಂದ್ರ ಅವರೇ ರಾಜ್ಯದ ಅಧ್ಯಕ್ಷರಾಗಿ ಮುಂದುವರೆಯಲಿದ್ದು ಅವರ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ ಎಂದರು.
ದಾವಣಗೆರೆಯಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಅಲ್ಲಿ ಮಾಜಿ ಶಾಸಕರು, ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆ ಸೋಲಿನಿಂದ ಬಿಜೆಪಿ ಕಾಯಕತರು ನೈತಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದರು.
ಸಭೆಯಲ್ಲಿ ನೊಂದವರಿಗೆ ಧ್ವನಿ ಆಗಬೇಕಿದೆ. ಅಲ್ಲಿ ಎಲ್ಲಾ ಬಿಜೆಪಿ ಮುಖಂಡರಿಗೆ ಆಹ್ವಾನ ನೀಡುತ್ತಿದ್ದೇವೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರನ್ನು ಬಚ್ಚಾ ಅನ್ನುತ್ತೇವೆ, ಆದ್ರೆ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಮಾಡಲಿಲ್ಲವೇ. ಅನಗತ್ಯವಾಗಿ ಮಾತನಾಡಬಾರದು ಅರ್ಥ ಮಾಡಿಕೊಳ್ಳಬೇಕು ಎಂದರು.
ಸ್ವಯಂಘೋಷಿತ ಬಿಜೆಪಿ ನಾಯಕರೇ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣರಾಗಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx