ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನವಾಝ್ (40) ಮತ್ತು ಅಜರುದ್ದೀನ್ ಅಲಿಯಾಸ್ ಅಜರ್ (38) ಬಂಧಿತ ಆರೋಪಿಗಳು.
ಬಂಧಿತರಿಂದ ಆರು ಲಕ್ಷ ಮೌಲ್ಯದ 120 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕದ ಯಂತ್ರ ಮತ್ತು ದ್ವಿಚಕ್ರ ವಾಹನವನ್ನು ಪೊಲೀಸ್ ತಂಡ ವಶಪಡಿಸಿಕೊಂಡಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.


