ಬೆಂಗಳೂರು : ಕಂಟೋನ್ಮಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಜಾಗದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿ ಶಾಬಾಜ್ ಖಾನ್‌ನನ್ನು (26) ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಜೆ. ಸಿ. ನಗರ ಮುನಿರೆಡ್ಡಿಪಾಳ್ಯದ ನಿವಾಸಿ ಶಬಾಜ್ ಖಾನ್, ಹಲವು ತಿಂಗಳಿನಿಂದ ಗಾಂಜಾ ಮಾರುತ್ತಿದ್ದ. ಸೆ. 22ರಂದು ಬೆಳಿಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 1 ಕೆ. ಜಿ 130 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


