ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕೆಂಚನಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇವರ ಜೊತೆಗಿದ್ದ ಮತ್ತೋರ್ವ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.
ಅಬ್ದುಲ್ಲಾ(21) ಹಾಗೂ ತನ್ವೀರ್(20) ಮೃತಪಟ್ಟ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ವಿದ್ಯಾರ್ಥಿಗಳು ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ತೆಗೆಯುತ್ತಿದ್ದ ಯುವಕ ಮಾತ್ರ ಬಚಾವಾಗಿದ್ದಾನೆ ಎಂದು ವರದಿಯಾಗಿದೆ.
ಇನ್ನೂ ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲು ರವಾನಿಸಲಾಗಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700