ತುಮಕೂರು: ಮಕ್ಕಳನ್ನು ಕೆಲಸಕ್ಕಲ್ಲ. ಶಾಲೆಗೆ ಕಳುಹಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಅವರು ಪೋಷಕರಲ್ಲಿ ಮನವಿ ಮಾಡಿದರು.
ಕಾರ್ಮಿಕ ಇಲಾಖೆಯಿಂದ ನಗರದ ಕುರಿ ಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗುರುವಾರ ಬಾಲಕಾರ್ಮಿಕ ವಿರೋಧಿ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 18 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಿಕ್ಷಣ ನೀಡಬೇಕು. ಶಿಕ್ಷಣವಿಲ್ಲದೆ ಮಕ್ಕಳ ಭವಿಷ್ಯವನ್ನು ಹಾಳು ಮಾಡಬಾರದು ಎಂದು ಜಾಗೃತಿ ಮೂಡಿಸಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವ ನಿಟ್ಟಿನಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಕಾರ್ಮಿಕ ನಿರೀಕ್ಷಕರಾದ ನಾಗಭೂಷಣ, ಚಂದ್ರು ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಜರಿದ್ದರು.