ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ಅಡ್ವಾಣಿಯವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆಯೂ ಅಡ್ವಾಣಿ ಅವರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಜುಲೈ ನಂತರ ಇದು ನಾಲ್ಕನೇ ಬಾರಿಗೆ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx