ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ (65) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ, ಮೂವರು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಾಮಾಜಿಕ, ರಾಜಕೀಯ ಹಾಗೂ ಮಾಧ್ಯಮ ರಂಗದಲ್ಲಿ ಸೇವೆ
ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಮಲಮ್ಮ ಅವರು ತುಮಕೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಮಾಧ್ಯಮ ರಂಗದಲ್ಲೂ ಸಕ್ರಿಯರಾಗಿದ್ದ ಅವರು, ಸುಮಾರು 46 ವರ್ಷಗಳ ಇತಿಹಾಸವಿರುವ ‘ಅಮೃತವಾಣಿ’ ಪತ್ರಿಕೆಯ ಉಪ ಸಂಪಾದಕಿಯಾಗಿ ಪತ್ರಿಕೆಯನ್ನು ಸಮರ್ಥವಾಗಿ ಮುನ್ನಡೆಸಿದ್ದರು.
ಗಣ್ಯರ ಸಂತಾಪ
ಕಮಲಾ ಗಂಗಹನುಮಯ್ಯ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ಕೆ.ಎನ್. ರಾಜಣ್ಣ, ಸೊಗಡು ಶಿವಣ್ಣ, ಶಾಸಕ ಜ್ಯೋತಿ ಗಣೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕ ಹಾಗೂ ತುಮಕೂರು ಪ್ರೆಸ್ ಕ್ಲಬ್ ತೀವ್ರ ಕಂಬನಿ ಮಿಡಿದು ಸಂತಾಪ ಸೂಚಿಸಿವೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


