ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್.ಶ್ರೀನಿವಾಸ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು.
ಇವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾನುಗೋಡು ಗ್ರಾಮದಲ್ಲಿ1939ರ ಫೆಬ್ರವರಿ 5ರಂದು ಜನಿಸಿದ ಕೆ.ಎಚ್. ಶ್ರೀನಿವಾಸ್ ಇಂಗ್ಲೀಷ್ ಎಂಎ ಜೊತೆಗೆ ಕಾನೂನು ಪದವಿ ಪಡೆದಿದ್ದರು. ಶ್ರೀನಿವಾಸ್ ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್, ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ, ಕೃಷಿಕರೂ ಆಗಿದ್ದರು. ಕವಿಯಾಗಿ, ಲೇಖಕರಾಗಿ ಹಲವು ಮಹತ್ವದ ಕೃತಿಗಳನ್ನು ನೀಡಿದ್ದ ಅವರು, ಸಿನೆಮಾದಲ್ಲೂ ಅಭಿನಯಿಸಿದ್ದರು.
ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. ಹಲವಾರು ಸಾಮಾಜಿಕ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ನೇಮಕಗೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು.
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು.ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.ಇಲ್ಲಿನ ಜೋಗ ರಸ್ತೆಯಲ್ಲಿರುವ ಎಲ್ ಬಿ ಕಾಲೇಜು ಇದರ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಕಾಲೇಜಿನ ಬೆಳವಣಿಗೆಗಳಲ್ಲಿ ಇವರ ಕೊಡುಗೆ ಅಪಾರವಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


