ನವದೆಹಲಿ: ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು , ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು.ಆದರೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.
ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy