ಹಾವೇರಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಂಗಲ್ ತಾಲ್ಲೂಕಿನ ಕೊಪ್ಪರಸಿಕೊಪ್ಪದಲ್ಲಿ ಇಬ್ಬರು ಬಾಲಕರು ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಧನುಷ್ ಚೋಳಪ್ಪನವರ್ (13) ಮತ್ತು ನಿಖಿಲ್ ಜಗದೀಶ್ ನಾಗೋಜಿ (11) ಮೃತಪಟ್ಟವರಾಗಿದ್ದಾರೆ.
ಧನುಷ್ ಮುಂಡ್‌ಗೋಡ್ ಖಾಸಗಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಮತ್ತು ನಿಖಿಲ್ ಕೊಪ್ಪರಸಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದ. ಇವರಿಬ್ಬರು ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇನ್ನೂ ಶಿಗ್ಗಾಂವ್ ತಾಲ್ಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಮತ್ತೊಂದು ದುರಂತ ನಡೆದಿದೆ. ಗೌಡರ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಪ್ರಜ್ವಲ್ ದೇವರಮಣಿ (14) ಮತ್ತು ಸನತ್ ಭೂಸರೆಡ್ಡಿ (14) ಎಂಬ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.
ಬೇಸಿಗೆ ಕಾಲದಲ್ಲಿ ಈಜಲು ತೆರಳುವ ವೇಳೆ ಅವಘಡಗಳು ಪ್ರತಿ ವರ್ಷವೂ ನಡೆಯುತ್ತಿದೆ. ಕೆರೆಯ ಆಳದ ಅರಿವು ಇಲ್ಲದೇ ನೀರಿಗಿಳಿಯುತ್ತಿರುವ ಮಕ್ಕಳು ಬಲಿಯಾಗುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4