ಬೆಂಗಳೂರು: ಇಂದು ರಾಜ್ಯದಲ್ಲಿ ನಡೆದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದರೆ, ಮಂಗಳೂರಿನಲ್ಲಿ ವಿದ್ಯಾರ್ಥಿ ಹೃದಘಾತಕ್ಕೆ ಬಲಿಯಾಗಿದ್ದಾನೆ.
ಲಾರಿ ಚಾಲಕ ಬಲಿ:
ಹಾವೇರಿ: ಏಕಾಏಕಿ ಎದೆನೋವು ಕಾಣಿಸಿಕೊಂಡು, ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕನಾಗಿದ್ದಾನೆ. ಚಾಲಕಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾನೆ.
ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ರವಾನೆಗೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿ ಬಲಿ:
ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC