ತುಮಕೂರು: ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವೆಂದು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ಟಿ.ಬಿ.ಎಸ್. ರಾಮೇಗೌಡ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ಹಾಗೂ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಆರೋಗ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತರರಿಗಾಗಿ ಗುರುವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇತ್ತೀಚಿನ ಪೌರಾಡಳಿತ ನಿರ್ದೇಶನಾಲಯದ ಆದೇಶಗಳನುಸಾರ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಪ್ರತ್ಯೇಕ ಪರವಾನಗಿ ನೀತಿಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ವ್ಯಾಪಾರ ನಡೆಸುವಂತಹ ಅಂಗಡಿ ಮಾಲೀಕರುಗಳು ಇನ್ನು ಮುಂದೆ ಕಡ್ಡಾಯವಾಗಿ ತಂಬಾಕು ವ್ಯಾಪಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ತಂಬಾಕು ಉತ್ಪನ್ನಗಳ ವ್ಯಾಪಾರ ನಡೆಸುವಂತೆ ವ್ಯಾಪಾರಸ್ಥರಿಗೆ ಪಾಲಿಕೆ ಅಧಿಕಾರಿಗಳು ತಿಳುವಳಿಕೆ ನೀಡಬೇಕು ಎಂದು ಸೂಚನೆ ನೀಡಿದರಲ್ಲದೇ ಆದೇಶ ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು ಹಾಗೂ ಅಂಗಡಿ ವ್ಯಾಪಾರಕ್ಕೆ ಪಡೆದ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ತಿಳಿಸಿದರು.
ವಿಭಾಗೀಯ ಸಂಯೋಜಕರಾದ ಜೈಲ್ ಥಾಮಸ್ ಉಪನ್ಯಾಸ ನೀಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ್ ಎಂ.ಆರ್.ಪ್ರಾಸ್ತಾವಿಕವಾಗಿ ಮಾತನಾಡಿದರು. ಆಪ್ತ ಸಮಾಲೋಚಕಿ ಕು: ರುಕ್ಮಿಣಿ ಟಿ.ಆರ್ ತಂಬಾಕು ಉತ್ಪನ್ನಗಳ ವ್ಯಸದಿಂದಾಗುವ ದುಷ್ಪರಿಣಾಮ ಹಾಗೂ ವ್ಯಸನಮುಕ್ತರಾಗಲು ಸಂಬಂಧಿಸಿದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಾರ್ಯಾಕರ್ತರು ಹರೀಶ್ ಕೆ.ಎಸ್ ಸ್ವಾಗತಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx