ಬಜೆಟ್ ಅಧಿವೇಶನ ಮುಗಿದ ನಂತರ ಅಡ್ವಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.
ಸಿಎಂ ಭೇಟಿ ಮಾಡಿದ ನಿಯೋಗಹಿಂದಿನ ಸರ್ಕಾರ ಮೀಸಲಾತಿಯ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ 4% ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ 2% ರಷ್ಟು ಮೀಸಲಾತಿ ನೀಡಿದೆ. 20, 2D ಸಹ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


