ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಬಿಪಿಎಲ್ ಕಾರ್ಡ್ ದಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಮುಂದಾಗಿದ್ದು, ಈ ನಡುವೆ ಆರ್ .ಅಶೋಕ್ ಹೇಳಿಕೆ ಮಹತ್ವ ಪಡೆದಿದೆ. ಸಿದ್ದರಾಮಯ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ತೆರಿಗೆ ಹೆಚ್ಚಳ ಮಾಡಿದ್ರೂ ಸಂಬಳ ಕೊಡೋಕೆ ಆಗುತ್ತಿಲ್ಲ. ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಪಾರಾಗಲು 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಅಂತ ಅವರು ಆರೋಪಿಸಿದ್ದಾರೆ.
ಅವೈಜ್ಞಾನಿಕ ಗ್ಯಾರೆಂಟಿಗಳು, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಅಕ್ಷರಶಃ ಪಾಪರ್ ಆಗಿರುವ
ಸರ್ಕಾರ ವರಮಾನ ಸಂಗ್ರಹಕ್ಕೆ ನಾನಾ ಮಾರ್ಗಗಳನ್ನ ಹುಡುಕಲು ಹೊರಟಿದೆ. ಸಂಪನ್ಮೂಲ ಕ್ರೋಢೀಕರಣಕ್ಕೆ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ (BCG) ಎಂಬ ವಿದೇಶಿ ಕಂಪನಿಗೆ ಹತ್ತಾರು ಕೋಟಿ ಸಂಭಾವನೆ ಕೊಟ್ಟು ಈಗಾಗಲೇ ಪ್ರಾಥಮಿಕ ವರದಿ ಪಡೆದಿರುವ ಕಾಂಗ್ರೆಸ್ ಸರ್ಕಾರ, ಈಗ ಮತ್ತೊಂದು ತಜ್ಞರ ಸಮಿತಿ ನೇಮಕ ಮಾಡಿದೆ. ಸಿಎಂ ಸಿದ್ದರಾಮಯ್ಯ ನವರೇ, ಕೂತು ತಿನ್ನುವವನಿಗೆ ಕುಡಿಕೆ ಹೊನ್ನೂ ಸಾಲದು ಎಂಬಂತೆ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ತಾನಾಗಿಯೇ ಸಂಪನ್ಮೂಲ ಕ್ರೂಢೀಕರಣ ಹೆಚ್ಚಳ ಆಗಬೇಕು ಅಂದರೆ ಅದು ಹೇಗೆ ಸಾಧ್ಯ? ಅಂತ ಅಶೋಕ್ ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q