ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿ ನಡೆಯಲಿದೆ ಅಂತ ಇತ್ತೀಚೆಗೆ ಬಾಂಬ್ ಸಿಡಿಸಿದ್ದ ಸಚಿವ ಕೆ.ಎನ್.ರಾಜಣ್ಣಗೆ ಆಗಸ್ಟ್ ನಲ್ಲೇ ಹೈಕಮಾಂಡ್ ಶಾಕ್ ನೀಡಿದ್ದು, ಕೆ.ಎನ್.ರಾಜಣ್ಣ ರಾಜೀನಾಮೆಯನ್ನು ಪಡೆಯಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆ ನೀಡಿರುವುದೇ ರಾಜೀನಾಮೆ ಪಡೆಯಲು ಕಾರಣ ಅಂತ ಹೇಳಲಾಗ್ತಿದೆ.
ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ಸೇರಿದಂತೆ ದೇಶದ ಹಲವೆಡೆ ಮತಕಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪದ ಬಗ್ಗೆ ಚರ್ಚೆಯಾಗುತ್ತಿದ್ದಾಗ, ಕೆ.ಎನ್.ರಾಜಣ್ಣ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡಿದ್ದರು. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು. ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ ಎಲ್ಲಾರು? ಅಂತ ರಾಜಣ್ಣ ಪ್ರಶ್ನಿಸಿ, ಕಾಂಗ್ರೆಸ್ ಗೆ ಮುಜುಗರ ಸೃಷ್ಟಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC