nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    ರಾಜ್ಯ ಸುದ್ದಿ March 18, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    By adminMarch 18, 2026No Comments2 Mins Read
    kd movie song

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನಾರ್ ತೇರಿ’) ಹಾಡು ಭಾರೀ ವಿವಾದಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಬಾಲಿವುಡ್‌ನ ಪ್ರಸಿದ್ಧ ಗೀತರಚನೆಕಾರ ರಕೀಬ್ ಆಲಂ ಅವರು ಈ ಬಗ್ಗೆ ಮೌನ ಮುರಿದಿದ್ದಾರೆ.

    ಈ ಹಾಡಿನ ಸಾಹಿತ್ಯವು ಮಹಿಳೆಯರಿಗೆ ಅವಮಾನಕಾರಿ ಹಾಗೂ ಅಶ್ಲೀಲತೆಯಿಂದ ಕೂಡಿದೆ ಎಂಬ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಹಿನ್ನೆಲೆಯಲ್ಲಿ ಹಾಡಿನ ಹಿಂದಿ ಆವೃತ್ತಿಯನ್ನು ಈಗಾಗಲೇ ಅಧಿಕೃತ ಪ್ಲಾಟ್‌ ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಕೀಬ್ ಆಲಂ ಅವರು, “ನಾನು ಈ ಹಾಡಿನ ಸಾಹಿತ್ಯವನ್ನು ಸ್ವತಂತ್ರವಾಗಿ ಬರೆದಿಲ್ಲ. ನಿರ್ದೇಶಕ ಪ್ರೇಮ್ ಅವರು ಕನ್ನಡದಲ್ಲಿ ಬರೆದಿದ್ದ ಮೂಲ ಸಾಹಿತ್ಯವನ್ನೇ ಹಿಂದಿಗೆ ಅನುವಾದ ಮಾಡುವಂತೆ ನನಗೆ ಕೇಳಲಾಗಿತ್ತು. ನಾನು ಕೇವಲ ಅನುವಾದಕನಾಗಿ ಕೆಲಸ ಮಾಡಿದ್ದೇನೆ ಹೊರತು, ಆ ಸಾಹಿತ್ಯ ನನ್ನದಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಇಂತಹ ದ್ವಂದ್ವಾರ್ಥದ ಸಾಹಿತ್ಯವು ಸೆನ್ಸಾರ್ ಮಂಡಳಿಯಲ್ಲಿ ಸಮಸ್ಯೆ ತಂದೊಡ್ಡಬಹುದು ಎಂದು ಭಾವಿಸಿ, ತಾವು ಆರಂಭದಲ್ಲಿ ಈ ಹಾಡಿಗೆ ಕೆಲಸ ಮಾಡಲು ನಿರಾಕರಿಸಿದ್ದಾಗಿ ಅವರು ತಿಳಿಸಿದ್ದಾರೆ. ಆದರೆ, ಚಿತ್ರತಂಡವು ಮೂಲ ಕನ್ನಡದ ಭಾವನೆಗೆ ಧಕ್ಕೆಯಾಗದಂತೆ ಅನುವಾದಿಸಲು ಒತ್ತಾಯಿಸಿದ್ದರಿಂದ ಒಪ್ಪಿಕೊಂಡಿದ್ದಾಗಿ ಅವರು ಹೇಳಿದ್ದಾರೆ.

    “ನಾನು ‘ಪುಷ್ಪ’ ಚಿತ್ರದ ಎಲ್ಲಾ ಹಿಂದಿ ಹಾಡುಗಳನ್ನು ಹಾಗೂ ರಾಮ್ ಚರಣ್ ಅವರ ‘ಗೇಮ್ ಚೇಂಜರ್’ ಚಿತ್ರದ ಹಾಡುಗಳನ್ನು ಬರೆದಿದ್ದೇನೆ. ಆದರೆ, ಈ ಒಂದು ಹಾಡಿನ ವಿವಾದದಿಂದಾಗಿ ನನಗೆ ತುಂಬಾ ಅವಮಾನವಾಗುತ್ತಿದೆ. ಇಂತಹ ಹಾಡಿನ ಜೊತೆ ನನ್ನ ಹೆಸರನ್ನು ಜೋಡಿಸುತ್ತಿರುವುದು ವಿಷಾದನೀಯ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಹಾಡು ಅಂತಿಮವಾಗಿ ಮದ್ಯದ ಬಾಟಲಿಯ ಬಗ್ಗೆ ಎಂಬುದು ತಿಳಿದಿದ್ದರೂ, ಅದಕ್ಕೂ ಮೊದಲು ಬರುವ ಸಾಲುಗಳು ಅಸಹಜ ಮತ್ತು ಅನುಚಿತವಾಗಿ ಕಾಣಿಸುತ್ತವೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಒಟ್ಟಿನಲ್ಲಿ ‘ಕೆಡಿ’ ಚಿತ್ರದ ಹಾಡಿನ ವಿವಾದ ಈಗ ಚಿತ್ರತಂಡ ಮತ್ತು ಗೀತರಚನೆಕಾರರ ನಡುವಿನ ಸಮರ್ಥನೆಯ ಹಂತಕ್ಕೆ ಬಂದು ತಲುಪಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.