ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಕಳೆದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಶಾಸಕರೊಬ್ಬರಿಗೆ ವಂಚನೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಪ್ರಲ್ಹಾದ ಜೋಶಿ ಸಹೋದರ ಗೋಪಾಲ್ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ ಎಫ್ ಐ ಆರ್ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪತಿ ದೇವಾನಂದ ಪುಲ್ ಸಿಂಗ್ ಚೌಹ್ಹಾಣ್ ಅವರಿಗೆ ಪ್ರಹ್ಲಾದ್ ಜೋಷಿ ಪ್ರಭಾವ ಬಳಸಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹೋದರ ಗೋಪಾಲ ಜೋಷಿ ಮತ್ತು ಸಹೋದರಿ ವಿಜಯ್ ಲಕ್ಷ್ಮಿ ಜೋಷಿ ಹಾಗೂ ಗೋಪಾಲ್ ಜೋಷಿ ಮಗ ಅಜಯ್ ಜೋಷಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ದುಡ್ಡು ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಲಂಬಾಣಿ ಸಮುದಾಯಕ್ಕೆ ಸೇರಿರುವ ದೇವಾನಂದ್ ಸಿಂಗ್ ಅವರು 2018ರಲ್ಲಿ ಬಿಜಾಪುರ ಜಿಲ್ಲೆಯ ನಾಗಠಾಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. 2023ರಲ್ಲಿ ಸೋತಿದ್ದರು. ಸುನೀತಾ ಚೌಹ್ಹಾಣ್ ಅವರಿಂದ ಮೊದಲು 25 ಲಕ್ಷ ಪಡೆದಿದ್ದ ಗೋಪಾಲ್ ಜೋಷಿ “”ಆ ಹಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರ ಸೆಕ್ರೆಟರಿಗೆ ನೀಡಿದ್ದು ನನ್ನ ತಮ್ಮ (ಪ್ರಹ್ಲಾದ್ ಜೋಷಿ)ನ ವರ್ಚಸ್ಸು ಚೆನ್ನಾಗಿದೆ, ಅವನ ಮಾತನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಹಾ ಇಬ್ಬರೂ ಕೇಳುತ್ತಾರೆ, ಟಿಕೆಟ್ ಗ್ಯಾರಂಟಿ” ಎಂದು ಭರವಸೆ ನೀಡಿದ್ದರಂತೆ.
ಟಿಕೆಟ್ ಸಿಗದೆ ಇದ್ದಾಗ ದುಡ್ಡು ವಾಪಸ್ ಕೇಳಲು ಹೋದರೆ ” ನನಗೆ 200 ಕೋಟಿ ರೂಪಾಯಿಗಳ ಪ್ರಾಜೆಕ್ಟ್ ಬಿಲ್ ಬರಲಿದೆ ಎಂದು ಸದ್ಯಕ್ಕೆ 1ಕೋಟಿ 75 ಲಕ್ಷ ಕೊಡಿ ನಂತರ ಎಲ್ಲ ಹಣ ವಾಪಸ್ ಕೊಡುತ್ತೇನೆ ಎಂದು ನನ್ನನ್ನು ನಂಬಿಸಿ ಒಟ್ಟು ಎರಡು ಕೋಟಿ ರೂಪಾಯಿ ಪಡೆದು ಗೋಪಾಲ್ ಜೋಷಿ ಅವರ ಮಗ ಅಜಯ್ ಸಿಂಗ್ ಹಾಗೂ ವಿಜಯ್ ಲಕ್ಷ್ಮೀ ಅವರು ವಂಚಿಸಿದ್ದಾರೆ. ಅದರ ನಂತರ ದುಡ್ಡ ವಾಪಸ್ ಕೇಳಲು ಹೊರಟರೆ ವಿಜಯ್ ಲಕ್ಷ್ಮಿ ಮತ್ತು ಅಜಯ್ ಜೋಷಿ ಗೂಂಡಾಗಳಿಂದ ಹಲ್ಲೆ ಮಾಡಿಸಿದ್ದಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ದೂರಿನಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296