nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    ತುಮಕೂರು October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    By Ganesh TumkuruOctober 6, 2026No Comments4 Mins Read
    g parameshwar.jpg

    ತುಮಕೂರು: ಜಿಲ್ಲೆ ಹಾಗೂ ತುಮಕೂರು ನಗರದ ಕೆಲವು ಪ್ರದೇಶಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲ ಹೇಮಾವತಿ ನದಿಯಾಗಿದೆ. ಈಗಾಗಲೇ 2 ಬಾರಿ ಹೇಮಾವತಿಯಿಂದ ನೀರು ಹರಿಸಲಾಗಿದೆ. ಆದರೆ ಪ್ರಸ್ತುತ ಲಭ್ಯವಿರುವ ನೀರಿನ ಪ್ರಮಾಣವನ್ನು ಗಮನಿಸಿದರೆ ತುಮಕೂರು ನಗರಕ್ಕೆ ಜನವರಿವರೆಗೆ ಮಾತ್ರ ಕುಡಿಯುವ ನೀರು ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಡಿಸಿಎಂ ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಕಳವಳ ವ್ಯಕ್ತಪಡಿಸಿದರಲ್ಲದೆ ನೀರನ್ನು ಮಿತವ್ಯಯದಿಂದ ಬಳಸುವಂತೆ ಸಲಹೆ ನೀಡಿದರು.

    ಜಿಲ್ಲೆಯ ಬರ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಎಸ್‌ ಪಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತ ಶುಭ, ಜಿಪಂ ಉಪ ಕಾರ್ಯದರ್ಶಿ ಸಂಜೀವಯ್ಯ ಮುಂತಾದವರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮಳೆಯಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಬಂದರೆ ಪರಿಸ್ಥಿತಿ ಸುಧಾರಿಸಬಹುದು. ಆದರೆ ಜನವರಿ ನಂತರವೂ ಮಳೆಯಾಗದಿದ್ದರೆ ಗಂಭೀರ ಸಮಸ್ಯೆ ಎದುರಾಗಲಿದೆ. ಆಗ ಕೊಳವೆಬಾವಿಗಳ ಮೇಲೆ ಅವಲಂಬಿಸಬೇಕಾಗುತ್ತದೆ. ತುಮಕೂರು ನಗರದಲ್ಲಿ 800ಕ್ಕೂ ಹೆಚ್ಚು ಕೊಳವೆಬಾವಿಗಳಿದ್ದರೂ, ಅವುಗಳಿಂದ ದೊರೆಯುವ ನೀರು ಇಡೀ ನಗರದ ಪ್ರತಿದಿನದ ಅಗತ್ಯ ಪೂರೈಸಲು ಸಾಕಾಗುವುದಿಲ್ಲ, ನಗರಕ್ಕೆ ದೊಡ್ಡ ಪ್ರಮಾಣದಲ್ಲಿ ನೀರು ಒದಗಿಸಬಹುದಾದ ಪರ್ಯಾಯ ಮೂಲ ಲಭ್ಯವಿಲ್ಲ.

    ಹೀಗಾಗಿ ಜನವರಿ ನಂತರ ಎದುರಾಗಬಹುದಾದ ಪರಿಸ್ಥಿತಿಗೆ ಈಗಿನಿಂದಲೇ ಕಂಟಿಜೆನ್ಸಿ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆಚ್ಚುವರಿ ಕೊಳವೆಬಾವಿಗಳ ಅಗತ್ಯವಿದ್ದರೆ, ಬೇರೆ ಯಾವ ಪರ್ಯಾಯ ನೀರಿನ ಮೂಲಗಳನ್ನು ಬಳಸಬಹುದು ಎಂಬುದನ್ನು ಪರಿಶೀಲಿಸಲು ತಿಳಿಸಿದ್ದೇನೆ ಎಂದರು.

    ದೊಡ್ಡ ಪ್ರಮಾಣದಲ್ಲಿ ನೀರು ಒದಗಿಸಬಹುದಾದ ಪರ್ಯಾಯ ಮೂಲ ಲಭ್ಯವಿಲ್ಲ. ಹೀಗಾಗಿ ಜನವರಿ ನಂತರ ಎದುರಾಗಬಹುದಾದ ಪರಿಸ್ಥಿತಿಗೆ ಈಗಿನಿಂದಲೇ ಕಂಟಿಜೆನ್ಸಿ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

    ನೀರನ್ನು ಮಿತವಾಗಿ ಬಳಸಿ; ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಮುಂದಿನ ಕೆಲವು ತಿಂಗಳುಗಳವರೆಗೆ ಸಮರ್ಪಕ ಮಳೆಯಾಗುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು. ನೀರಿನ ಬಳಕೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ರೂಪಿಸುವುದಕ್ಕಿಂತ ಜನರ ಮೂಲಭೂತ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ಸರ್ಕಾರದ ಮೊದಲ ಆದ್ಯತೆ ಎಂದರು.

    46 ಸಾವಿರ ಕೋಟಿ ನಷ್ಟ:

    ರಾಜ್ಯದಲ್ಲಿ ಪ್ರಸ್ತುತ ಸುಮಾರು 217 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. 177 ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಈ ಪ್ರದೇಶಗಳಲ್ಲಿ ಸುಮಾರು 46 ಸಾವಿರ ಕೋಟಿ ನಷ್ಟ ಉಂಟಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಡಿ ಸದ್ಯ ಸುಮಾರು 10 ಸಾವಿರದಿಂದ 1 ಸಾವಿರ ಕೋಟಿ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಕೋರಲಾಗಿದೆ. ಸಂಪೂರ್ಣ ನಷ್ಟದ ಮಾಹಿತಿ ಲಭ್ಯವಾದ ಬಳಿಕ ರಾಜ್ಯದ ಬೇಡಿಕೆಯ ಪ್ರಮಾಣವು ಹೆಚ್ಚಾಗಲಿದೆ. ಕಳೆದ ಬಾರಿ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿ ನಿರ್ದೇಶನ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಎದುರಾಗುವುದಿಲ್ಲವೆಂಬ ವಿಶ್ವಾಸವಿದೆ ಎಂದು ಪರಮೇಶ್ವರ್ ನಡಿದರು.

    ಭದ್ರಾ ಮೇಲ್ದಂಡೆ ನೀರು ಸಿರಾಕ್ಕೆ ಬರಲಿದೆ:

    ಚಿತ್ರದುರ್ಗ ಮತ್ತು ಹಿರಿಯೂರು ಭಾಗಕ್ಕೆ ಭದ್ರಾ ಮೇಲ್ದಂಡೆ ನೀರು ತಲುಪುವ ಕಾಲಗಳ ಕಾಲ ಹೋರಾಟ ಮುಕ್ತ ಪ್ರಕ್ರಿಯೆ ನಡೆದಿದೆ. ಅದೇ ರೀತಿ ಸಿರಾ ಭಾಗಕ್ಕೂ ನೀರು ತಲುಪಿಸುವ ಪ್ರಕ್ರಿಯೆಗೆ ಸ್ವಲ್ಪ ಸಮಯ ಬೇಕಾಗಬಹುದು. ಆದರೆ ಸಿರಾ ಭಾಗಕ್ಕೆ ಅಷ್ಟರ್ ಭದ್ರಾ ನೀರು ಬರಲಿದೆ ಎಂಬ ವಿಶ್ವಾಸವಿದೆ ಎಂದು ಡಾ. ಜಿ. ಪರಮೇಶ್ವರ್‌ವಿಶ್ವಾಸ ವ್ಯಕ್ತಪಡಿಸಿದರು.

    ಜಿಲ್ಲೆ, ರಾಜ್ಯದ ಜನರನ್ನು ನೀರನ್ನು ಅತ್ಯಂತ ಮಿತವಾಗಿ ಬಳಸಬೇಕು. ವಾಹನಗಳನ್ನು ತೊಳೆಯುವ, ಅನಗತ್ಯವಾಗಿ ಹೆಚ್ಚಿನ ನೀರು ಬಳಸಲು ಸಾಧ್ಯವಾದಷ್ಟು ಕಡಿತ ಮಾಡಿ ಸಹಕರಿಸಬೇಕೆಂದರು.

    33 ವಾರಗಳಿಗೆ ಸಾಕಾಗುವ ಮೇವು ಲಭ್ಯ:

    ಜಾನುವಾರುಗಳು ರೈತರ ಆಸ್ತಿಯಾಗಿದ್ದು, ಅವುಗಳನ್ನು ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆ. ಎರಡು ತಿಂಗಳ ಹಿಂದೆಯೇ ರೈತರಿಗೆ ಮೇವು ಬೀಜದ ಕಿಟ್ಗಳನ್ನು ವಿತರಿಸಲಾಗಿದ್ದು, ಈಗ ಅವುಗಳಿಂದ ಬೆಳೆದ ಮೇವು ಬಳಕೆ ಬರುವ ಹಂತದಲ್ಲಿದೆ. ಜೋಳ ಸೇರಿದಂತೆ ಮೇವು ಬೆಳೆಗಳು ಮೂರು-ನಾಲ್ಕು ಅಡಿಯಷ್ಟು ಬೆಳೆದು, ಮುಂದಿನ ದಿನಗಳಲ್ಲಿ ಅವು ರೈತರಿಗೆ ನೆರವಾಗಲಿವೆ. ರಾಜ್ಯ ಸರ್ಕಾರ ಮೇವು ಖರೀದಿ ಮತ್ತು ಪೂರೈಕೆಗೆ ಈಗಾಗಲೇ 125 ಕೋಟಿ ಒದಗಿಸಿದೆ. ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಸುಮಾರು 33 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ ಎಂದರು.

    ತಿಪಟೂರು ಭಾಗದ ರೈತರು ಮೇವು ಬ್ಯಾಂಕ್ ಸ್ಥಾಪಿಸುವಂತೆ ಬೇಡಿಕೆ ಇಟ್ಟಿರುವುದ ಕುರಿತು ಪ್ರತಿಕ್ರಿಯಿಸಿದ ಅವರು, ರೈತರ ಬೇಡಿಕೆಗಳಿಗೆ ಸರ್ಕಾರ ಗೌರವ ನೀಡುತ್ತದೆ. ಸದ್ಯ ತಕ್ಷಣವೇ ಮೇವು ಬ್ಯಾಂಕ್ ಆರಂಭಿಸಬೇಕಾದ ಪರಿಸ್ಥಿತಿ ಬಂದಿಲ್ಲ, ಆದರೆ ಅಗತ್ಯ ಉಂಟಾದ ತಕ್ಷಣವೇ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಾಗಿದೆ. ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪರಿಸ್ಥಿತಿ ಬದಲಾಗಬಹುದು. ಆಗಿನ ಅಗತ್ಯತೆ ಆಧರಿಸಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

    ಬಿಬಿ-ಜಿ ರಾಮ್ ಜಿ ಕಾರ್ಯಕ್ರಮದಡಿ ಈಗಾಗಲೇ ಸುಮಾರು ನಾಲ್ವಾರು ಲಕ್ಷದಿಂದ ಐದು ಲಕ್ಷ ಮಾನವ ದಿನಗಳಷ್ಟು ಉದ್ಯೋಗ ಸೃಷ್ಟಿಸಲಾಗಿದೆ. ಈ ಕಾಮಗಾರಿಗಳನ್ನು ಮತ್ತಷ್ಟು ಹೆಚ್ಚಿಸಿ ಗ್ರಾಮೀಣ ಜನರಿಗೆ ಉದ್ಯೋಗ ಮತ್ತು ಆದಾಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೈತರ ನೆರವಿಗೆ ರಾಜ್ಯ ಸರ್ಕಾರ ಈಗಾಗಲೇ ಪ್ರತಿ ರೈತರಿಗೆ 2,500 ರೂ. ನೆರವು ನೀಡುತ್ತಿದೆ ಎಂದರು.

    ಮುಖ್ಯಮಂತ್ರಿಗಳು ಮತ್ತು ನಾನು ಬರದ ಪರಿಸ್ಥಿತಿ ಕುರಿತು ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದೇವೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವ ಕಾರ್ಯವೂ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬರಪೀಡಿತ ಜಿಲ್ಲೆಗಳಿಗೆ ಮೂರು ದಿನಗಳ ಪ್ರವಾಸ ಕೈಗೊಂಡು ಪರಿಸ್ಥಿತಿ ಅವಲೋಕಿಸಲಾಗುವುದು ಎಂದು ತಿಳಿಸಿದರು.

    ರೈತರ ಸಾಲ ಮರುಪಾವತಿ ಅವಧಿಯನ್ನು 60 ತಿಂಗಳವರೆಗೆ ಮುಂದುಡಲಾಗಿದೆ ಎಂದ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ರೈತರು ಅಥವಾ ಸಾರ್ವಜನಿಕರಿಗೆ ಕಿರುಕುಳ ನೀಡಿದರೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ಕಾನೂನು ರೂಪಿಸಿದೆ. ಬರದ ಪರಿಸ್ಥಿತಿಯಲ್ಲಿ ರೈತರಿಗೆ ಸಾಧ್ಯವಾದ ಎಲ್ಲ ರೀತಿಯ ರಕ್ಷಣೆ ನೀಡಲಾಗುವುದು. ಸರ್ಕಾರ, ಪ್ರತಿಪಕ್ಷ ಮತ್ತು ಸಾರ್ವಜನಿಕರು ಒಟ್ಟಾಗಿ ಬಂದು ಎದುರಿಸಬೇಕಾಗಿದೆ. ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಬರಲು ಪ್ರತಿಪಕ್ಷಗಳಿಗೆ ಮತ್ತೊಮ್ಮೆ ಮನವೊಲಿಸಲಾಗುವುದು.

    ಬರ ಪರಿಶೀಲಿಸುವ ಕಾರ್ಯವೂ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಬರಪೀಡಿತ  ಜಿಲ್ಲೆಗಳಿಗೆ ಮೂರು ದಿನಗಳ ಪ್ರವಾಸ ಕೈಗೊಂಡು ಪರಿಸ್ಥಿತಿ ಅವಲೋಕಿಸಲಾಗುವುದು ಎಂದು ತಿಳಿಸಿದರು.

    ಎತ್ತಿನಹೊಳೆ ಕೋರಾ ಹೋಬಳಿ ಸೇರ್ಪಡೆ ಪರಿಶೀಲನೆ:

    ಕೋರಾ ಹೋಬಳಿಯ ರೈತರು ಎಂಬತ್ತಹಳ್ಳಿ ಕೆರೆಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸುವಂತೆ ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್ ಅವರು, ಈ ಹಂತದಲ್ಲಿ ಯಾರನ್ನೂ ದೂಷಿಸುವ ಪ್ರಶ್ನೆ ಇಲ್ಲ. ಕೊರಟಗೆರೆಗೆ ಈಗಾಗಲೇ ನೀಡಿರುವ ನೀರಿನ ಹಂಚಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕೋರಾ ಹೋಬಳಿಯನ್ನು ಸೇರಿಸುವಂತೆ ಯೋಜನೆಯನ್ನು ಮರುಪರಿಶೀಲಿಸುವಂತೆ ಮುಖ್ಯ ಇಂಜಿನಿಯರ್‌ಗೆ ಸೂಚಿಸಲಾಗಿದೆ. ಸರ್ಕಾರದ ಹಂತದಲ್ಲಿದಕ್ಕಾಗಿ ಪ್ರಯತ್ನಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಹಾಲಿನ ದರ ಹೆಚ್ಚಳದ ಕುರಿತು ಚರ್ಚೆ ನಡೆಯುತ್ತಿದೆ ಹೊರತು ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇನ್ನೂ ಚರ್ಚೆಯಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.