ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳಲಿದೆ. ಈ ಅಧಿವೇಶನ ರಾಜ್ಯ ಸರಕಾರ ಮತ್ತು ವಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
ಜುಲೈ 3, ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲದ ಉಭಯ ಸದನಗಳ ಕಲಾಪ ನಡೆಯಲಿದೆ. ಜುಲೈ.
3ರ ಮೊದಲ ದಿನವಾದ ಇಂದು ಮಧ್ಯಾಹ್ನ 12 ಗಂಟೆಗೆ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರು ಭಾಷಣ ಮಾಡಲಿದ್ದಾರೆ.
ಇನ್ನೂ ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ತಯಾರಿ ನಡೆಸಿದೆ.
ವಿಪಕ್ಷಗಳನ್ನು ಮಣಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೂಡ ತಯಾರಿ ನಡೆಸಿದೆ.
ಇದೇ ವಿಧಾನಮಂಡಲದ ಅಧಿವೇಶನದಲ್ಲೇ ಕರ್ನಾಟಕ ಬಜೆಟ್ ಅನ್ನು ಕೂಡ ಮಂಡಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


