nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ
    ತುಮಕೂರು March 21, 2022

    ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ

    By adminMarch 21, 2022No Comments2 Mins Read
    covid warriors protest

    ತುಮಕೂರು: ಕೋವಿಡ್ -19 ರ ತುರ್ತು ಪರಿಸ್ಥಿತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಅರೇ- ವೈದ್ಯಕೀಯ ಸಿಬ್ಬಂದಿಯನ್ನು 2022 ಮಾರ್ಚ್ 31 ನಂತರವು ಸೇವೆಯಿಂದ ಮುಂದುವರೆಸುವಂತೆ ಒತ್ತಾಯ ಕೊರೊನಾ ವಾರಿಯರ್ಸ್ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾತನಾಡಿದ ಕೊರೊನಾ ವಾರಿಯರ್ಸ್, ಕೋವಿಡ್ -19ರ ತುರ್ತು ಪರಿಸ್ಥಿತಿಯಲ್ಲಿ ನಮ್ಮನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಾವು ನಮ್ಮ ಕುಟುಂಬ, ಮನೆ-ಮಠ ಬಿಟ್ಟು, ನಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜೊತೆಯಲ್ಲಿಯೇ ಸೇರಿದ ಕೆಲವು ಆರೋಗ್ಯ ಸಿಬ್ಬಂದಿಗಳು ಪ್ರಾಣಭಯದಿಂದ ಹಾಗೂ ಕೊರೊನ ಮಹಾ ಮಾರಿಗೆ ಹೆದರಿ ಅರ್ಧಕ್ಕೆ ಕೆಲಸವನ್ನು ಬಿಟ್ಟು ಹೋದರು. ಆದರೆ ನಮ್ಮಲ್ಲಿ ಹಲವರಿಗೆ ಹಲವು ಬಾರಿ ಕೊರೂನಾ ಪಾಸಿಟಿವ್ ಬಂದು ಸಾವಿನ ಕದ ತಟ್ಟಿ ಸಾವಿನ ಸೋಲನ್ನು ಒಪ್ಪದೆ ಪುನಃ ಕರ್ತವ್ಯಕ್ಕೆ ಮರಳಿ ಕರ್ತವ್ಯವನ್ನು ಸಲ್ಲಿಸುತ್ತಿದ್ದೇವೆ. ಜೊತೆಗೆ ಕೂರೊನಾ ಲಸಿಕಾ ಅಭಿಯಾನದಲ್ಲಿ ಭಾರತದ ಐತಿಹಾಸಿಕ ಮೈಲುಗಲ್ಲಿನ ಸಾಧನೆಯಲ್ಲಿ ನಾವು ಸಹಾ ಭಾಗಿಯಾಗಿ ಕರ್ತವ್ಯ ಸಲ್ಲಿಸಿದ್ದೇವೆ. ಕಷ್ಟ ಕಾಲದಲ್ಲಿ ನಾವು ಸರ್ಕಾರದ ಜೊತೆಯಾಗಿ ನಿಂತು ದುಡಿಯುತ್ತಿದ್ದೇವೆ, ಮುಂದೆಯು ಸಹ ದುಡಿಯಲು ಸಿದ್ಧರಿದ್ದೇವೆ. ಆದರೆ ಈ ಹಂತದಲ್ಲಿ ಕೊರೊನ ಹೆಚ್ಚಾಗುವುದರಿಂದಲೇ ಕೊರೊನ ವಾರಿಯರ್ಸ್ ಗಳ ಕೆಲಸ ಉಳಿಯುತ್ತಿದೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಕಡಿಮೆ ಆದ ಮೇಲೆ ನಮ್ಮನ್ನು ಕೆಲಸದಿಂದ ತೆಗೆದರೆ ಕೊರೊನಾ ವಾರಿಯರ್ಸ್ ಗಳಾದ ಫಾರ್ಮಸಿ ಅಧಿಕಾರಿಗಳು, ಲ್ಯಾಬ್ ಟೆಕ್ನಿಶಿಯನ್, ಪಿ ಎಚ್ ಸಿ ಓ, ಗ್ರೂಪ್ – ಡಿ, ಸ್ವಾಬ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ಮತ್ತಿತರ ಕೊರೊನಾ ವಾರಿಯರ್ಸ್ ಗಳು ನಿರ್ಗತಿಕರಾಗಿ, ನಿರುದ್ಯೋಗಿಗಳಾಗಿ ಬೀದಿಗೆ ಬರಬೇಕಾಗುತ್ತದೆ  ಎಂದು ಆತಂಕ ವ್ಯಕ್ತಪಡಿಸಿದರು.

    ಈಗಾಗಲೇ ಪ್ರಧಾನಿ ಮೋದಿಜಿಯವರು, ಕೂರೂನಾ ವಾರಿಯರ್ಸ್ ಆಗಿ 100 ದಿನಗಳ ಕಾಲ ಸೇವೆ ಸಲ್ಲಿಸಿದವರಿಗೆ ಸೇವಾ ಭದ್ರತೆಯನ್ನು ಒದಗಿಸಿ ಮುಂಬರುವ ಸರ್ಕಾರಿ ಕೆಲಸಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅದೇಶ ಹೊರಡಿಸಿದರೆ ಸುಮಾರು 4,000 ಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ ಗಳಿಗೆ ಮತ್ತು ಅವರ ಕುಟುಂಬದವರಿಗೆ ಆಧಾರವಾಗುತ್ತದೆ. ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಂಕಿಸಂಖ್ಯೆ ಸಮೇತ ಪತ್ರಿಕೆ, ಅಂತರ್ಜಾಲ ಹಾಗೂ ಮಾಧ್ಯಮದಲ್ಲಿ ವರದಿಯಾಗಿರುವುದರಿಂದ ತಾವು ಇದನ್ನು ಪರಿಶೀಲಿಸಿ ಖಾಲಿ ಇರುವ ಸ್ಥಳಗಳಿಗೆ ಅಸ್ಪತ್ರೆಗಳಿಗೆ ನಮ್ಮ ಸೇವಾಕಾರ್ಯವನ್ನು ಹಾಗೂ ಅನುಭವವನ್ನು ಪರಿಗಣಿಸಿ ಮಾನವೀಯತೆ ದೃಷ್ಠಿಯಿಂದ ನಮ್ಮನ್ನು ಖಾಲಿ ಇರುವ ಸ್ಥಳಗಳಿಗೆ ನೇಮಿಸಿದರೆ ನಮಗೂ ಉದ್ಯೋಗ ದೊರಕಿ ನಮ್ಮೆಲ್ಲರ ಕುಟುಂಬಗಳಿಗೆ ಭದ್ರತೆ ದೊರಕಿದಂತಾಗುತ್ತದೆ. ಈಗಾಗಲೇ ಹಲವಾರು ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ತರಬೇತಿ ಮತ್ತು ಯೋಜನೆಗಳ ಬಗ್ಗೆ ಅರಿವು ಇರುವುದಿಂದ ತಾವುಗಳು ದಯಮಾಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ನಮ್ಮ ಜೀವನಕ್ಕೆ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದರು

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ಮಾದಿಗ ಓಣಿಯಲ್ಲಿ ಲೋಕಶಾಹಿರ್ ಸಾಹಿತ್ಯ ರತ್ನ ಶ್ರೀ ಅಣ್ಣಾಭಾವು…

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.