ಮಡಕಶಿರಾ: ಪಟ್ಟಣದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ 286ನೇ ಜಯಂತಿಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯ ಸಮಯದಲ್ಲಿ ಯುವಕರು ಸಂತ ಸೇವಾಲಾಲ್ ಮಹಾರಾಜ್ ಅವರ ಬಾವುಟಗಳನ್ನು ಹಿಡಿದು ಸಂಭ್ರಮಿಸಿದರು. ಮಹಿಳೆಯರು ಲಂಬಾಣಿ ಸಮುದಾಯದ ಪರಂಪರೆಯ ವೇಷಭೂಷಣಗಳಲ್ಲಿ ಭಾಗವಹಿಸಿ ಲಂಬಾಣಿ ನೃತ್ಯ ಪ್ರದರ್ಶಿಸಿದರು.
ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾಲಾಲ್ ಮಹಾರಾಜರ ಭೋಗ್ ಹಾಗೂ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಡಕಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಎಸ್.ರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, “ಲಂಬಾಣಿ ತಾಂಡಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಮನೆ ನೀರು ಮುಂತಾದವುಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ. ಮಡಕಶಿರಾ ಪಟ್ಟಣದಲ್ಲಿ ಸಂತ ಸೇವಾಲಾಲ್ ಮಹಾರಾಜ್ ವೃತ್ತವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ಪ್ರತಿ ತಾಂಡಗಳಿಗೆ ಸ್ಮಶಾನ ಜಾಗ ಮಂಜೂರು ಮಾಡಿಸಲಾಗುವುದು ಜೊತೆಗೆ ಮಡಕಶಿರಾ ಕ್ಷೇತ್ರದ ಗಿರಿಜನ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕಾಗಿ ಕ್ಷೇತ್ರದಲ್ಲಿ ಗಿರಿಜನ ಗುರುಕುಲ ಶಾಲೆ ಸ್ಥಾಪಿಸಿ ಉತ್ತಮ ಸ್ಥಿತಿಯಲ್ಲಿರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಾಜಿ MLC ಗುಂಡಮಲ ತಿಪ್ಪೇಸ್ವಾಮಿ ಮಾತನಾಡಿ, ಲಂಬಾಣಿ ಸಮುದಾಯದವರು ನನಗೆ ಸಹೋದರ ಸಹೋದರಿಯರಿದ್ದಂತೆ ತಾಂಡಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತೊಂದರೆ ನಾನು ನಮ್ಮ ಶಾಸಕರ ಜೊತೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಈ ಕಾರ್ಯಕ್ರಮ ಹಲವರು ಗಣ್ಯರು, ಸಮುದಾಯದ ಮುಖಂಡರು ಮತ್ತು ಭಕ್ತಾದಿಗಳು ಭಾಗವಹಿಸಿ, ಸಂತ ಸೇವಾಲಾಲ್ ಮಹಾರಾಜ್ ಅವರ ಜೀವನದ ಆದರ್ಶಗಳನ್ನು ಸ್ಮರಿಸಿದರು.
ವರದಿ: ನಂದೀಶ್ ನಾಯ್ಕ್ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4