ಚಲಿಸುತ್ತಿದ್ದ ರೈಲಿನಲ್ಲಿ ಮುಸುಕುಧಾರಿ ವ್ಯಕ್ತಿಯೊಬ್ಬ ಹಲವರಿಗೆ ಹಲ್ಲೆ ಮಾಡಿದ ಘಟನೆ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ. ಗಾಯಾಳುಗಳ ಆರೋಗ್ಯವನ್ನು ರೈಲ್ವೆ ಡಿಐಜಿ ಶರಣಪ್ಪ ವಿಚಾರಿಸಿದ್ದಾರೆ. ಡಿಐಜಿ ಮಾತನಾಡಿ, ಐಪಿಸಿ ಸೆಕ್ಷನ್ 302, 307, 332, 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪುದುಚೇರಿ ದಾದರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ.
ಅನಾಮಿಕ ಪ್ರಯಾಣಿಕ ಟಿಕೆಟ್ ವಿಚಾರಕ್ಕೆ ಟಿಟಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಅವರ ಸಹಾಯಕ್ಕೆ ಬಂದ ಕೋಚ್ ಹೆಲ್ಪಿಂಗ್ ಸ್ಟಾಫ್ ಮೇಲೆಯೂ ಹಲ್ಲೆ ಆಗಿದೆ. ಆ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ರೈಲ್ವೆ ಇಲಾಖೆಯೊಂದಿಗೆ ಮಾತನಾಡಿದ್ದೇವೆ. ಮೃತನ ಕುಟುಂಬಕ್ಕೆ ರೈಲ್ವೆ ಇಲಾಖೆಯಿಂದ ಪರಿಹಾರ ನೀಡಲಾಗುತ್ತಿದೆ. ದೇವರ್ಷಿ ವರ್ಮಾ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದ ಡಿಐಜಿ ಶರಣಪ್ಪ, ಹಲ್ಲೆ ಮಾಡಿದ ಆರೋಪಿ ಪತ್ತೆಗೆ ಆರ್ ಪಿಎಫ್, ಜಿಆರ್ ಪಿ ಮತ್ತು ಸ್ಥಳೀಯ ಪೊಲೀಸ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.
ನಾಲ್ಕು ವಿಶೇಷ ತಂಡಗಳನ್ನು ಈಗಾಗಲೇ ರಚನೆ ಮಾಡಲಾಗಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಮ್ಮ ರಾಜ್ಯದಲ್ಲಿ ದಿನಕ್ಕೆ 1,400 ರೈಲುಗಳು ಓಡಾಡುತ್ತವೆ. ಆದರೆ, ನಮ್ಮ ಸಿಬ್ಬಂದಿ ಇರೋದು ಕೇವಲ 830 ಮಾತ್ರ. ಒಂದ ಟ್ರೇನ್ ಗೆ ಒಬ್ಬ ಸಿಬ್ಬಂದಿಯನ್ನೂ ಹಾಕಲು ಆಗದ ಪರಿಸ್ಥಿತಿ ಇದೆ. ಹಾಗಾಗಿ, ಕ್ರೈಂ ಹಾಗೂ ಸೂಕ್ಷ್ಮ ಪ್ರದೇಶಗಳ ಆಧಾರದ ಮೇಲೆ ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296