ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಹಾಗೂ ಆತನ ಕೃತ್ಯಕ್ಕೆ ಸಹಕರಿಸಿದ ಬಾಲಕಿ ಚಿಕ್ಕಮ್ಮ ಮತ್ತು ಅಜ್ಜಿಗೆ ಜೀವಾವಧಿ ಶಿಕ್ಷೆ ಮತ್ತು 3.50 ಲಕ್ಷ ರೂ. ದಂಡ ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ POCSO ನ್ಯಾಯಾಲಯವು ತೀರ್ಪು ನೀಡಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ತಂದೆಗೆ ಎರಡು ಮದುವೆಯಾಗಿತ್ತು. 2ನೇ ಪತ್ನಿ ರತ್ನಮ್ಮ ಮತ್ತು ಆಕೆಯ ತಾಯಿ ಗಂಗಮ್ಮ ನೊಂದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೆಲಸಕ್ಕೆ ಹೋಗೋಣ ಎಂದು ಸುಳ್ಳು ಹೇಳಿ ಪೆನುಗೊಂಡಕ್ಕೆ ಕರೆದೊಯ್ದು ಅಲ್ಲಿಂದ ವರಂಗಲ್ ನ ಶೆಡ್ ವೊಂದಕ್ಕೆ ಕರೆದೊಯ್ದು ಕೂಡಿ ಹಾಕಿ ಆರೋಪಿ ಅರುಣ್ ಕುಮಾರ್ ನನ್ನು ಶೆಡ್ ನೊಳಗೆ ಕಳುಹಿಸಿದ್ದು, ಆತ ನೊಂದ ಬಾಲಕಿ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಘಟನೆ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನಂತೆ ಪಾವಗಡ ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ್ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಾದ ಅರುಣ್ ಕುಮಾರ್, ರತ್ನಮ್ಮ ಮತ್ತು ಗಂಗಮ್ಮ ಇವರ ವಿರುದ್ಧ ಇದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು 3.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಜೊತೆಗೆ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 10 ಲಕ್ಷ ಪರಿಹಾರ ಆರೋಪಿಗಳ ದಂಡದ ಮೊತ್ತ ಸೇರಿದಂತೆ ಒಟ್ಟು 13.50 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ಅಭಿಯೋಜನೆ ಪರವಾಗಿ ವಾದ ಮಂಡಿಸಿದರು.
ವರದಿ: ಶಿವಕುಮಾರ್ ಮೇಷ್ಟ್ರುಮನೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————