ಗುಜರಾತ್: 11 ವರ್ಷದ ಬಾಲಕನೊಬ್ಬ ತನ್ನ ನೆರೆಹೊರೆಯ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನ ಸೂರತ್ ನಗರದಲ್ಲಿ ನಡೆದಿದೆ.
ಮಾ.29 ರಂದು ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ತಮ್ಮ ಮನೆಗಳ ಬಳಿ ಆಟವಾಡುತ್ತಿದ್ದು, ಬಾಲಕ ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ಯಾರ ಬಳಿ ಹೇಳಿದರೆ ಚಪ್ಪಲಿಯಿಂದ ಹೊಡೆದು ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇದರಿಂದ ಬೆದರಿದ ಈಕೆ ಯಾರಲ್ಲೂ ಈ ವಿಷಯವನ್ನು ಹೇಳಲಿಲ್ಲ. ಆದರೆ ಮರುದಿನ ಈಕೆಯ ಗುಪ್ತಾಂಗದಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಆಘಾತಕಾರಿ ಸತ್ಯವನ್ನು ಹೇಳಿದ್ದಾರೆ. ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಆಕೆಯ ಜನನಾಂಗದಲ್ಲಿ ಗಾಯವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ.
ಮನೆಯವರು ಆಘಾತಗೊಂಡಿದ್ದು, ಕೂಡಲೇ ಬಾಲಕಿಯನ್ನು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ಹೇಳಿದ್ದಾಳೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯ ಸುರಕ್ಷತೆಯನ್ನು ಖ್ಯಾತಿಪಡಿಸಿದ ನಂತರ ಅವರು ಅಥ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದು, ಅಪ್ರಾಪ್ತನ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA