nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ
    ತುಮಕೂರು April 24, 2025

    ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ

    By adminApril 24, 2025No Comments2 Mins Read
    judgement

    ತುಮಕೂರು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ POCSO ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಬಾಲನ ಪ್ರತಿಷ್ಠಿತ ವಿದ್ಯಾಸಂಸ್ಥೆಯೊಂದರ ಹಾಸ್ಟೆಲ್ ನಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ.  ಮೇ 24, 2022ರಂದು ರಾತ್ರಿ ಸುಮಾರು 7:30 ಗಂಟೆಗೆ ಬಸವರಾಜ್ ಎಂಬಾತನ ಮೊಬೈಲ್ ಮೂಲಕ ನೊಂದ ಬಾಲಕ ತನ್ನ ತಂದೆಗೆ ಕರೆ ಮಾಡಿದ್ದ. ಬಳಿಕ  ಬಸವರಾಜು ಬಾಲಕನಿಗೆ ಕುರ್ ಕುರೆ ಮತ್ತು ಚಿಕನ್ ಕೊಡಿಸುವುದಾಗಿ ಕರೆದೊಯ್ದು ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

    ಬಾಲಕ ಬಳಿಕ ತನಗೆ ಅನಾರೋಗ್ಯ ಎಂದು ಊರಿಗೆ ಬಂದಿದ್ದು, ಆತನ ಆರೋಗ್ಯ ಹದಗೆಟ್ಟಿದೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಬಾಲಕ ತನ್ನ ತಂದೆಯ ಬಳಿಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾನೆ. ಬಾಲಕನ ಹೇಳಿಕೆಯ ಆಧಾರದಲ್ಲಿ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಪ್ರಕರಣದ ಪ್ರಥಮ ವರ್ತಮಾನವನ್ನು ಪದ್ಮಾವತಿ ಜಿ. ಅವರು ಮಾಡಿದ್ದು, ಡಾ.ನವೀನ್ ಕುಮಾರ್ ಎಂ.ಡಿ. ಅವರು ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಆರೋಪಿ ಬಸವರಾಜನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ  ಆತನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ.

    ನೊಂದ ಬಾಲಕನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 8 ಲಕ್ಷ ರೂ. ಸೇರಿದಂತೆ ಒಟ್ಟು 9 ಲಕ್ಷ ರೂ. ಪರಿಹಾರ ನೀಡುವಂತೆ  ನ್ಯಾಯಾಧೀಶರು ಆದೇಶಿಸಿದ್ದಾರೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ  ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ. ಕೆ.ಎಸ್. ಅವರು ವಾದ ಮಂಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.