ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) 20 ವರ್ಷಗಳ ಶಿಕ್ಷೆ ಹಾಗೂ 1.50 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ.
ಈ ಘಟನೆ ಅಮೃತೂರು ಪೊಲೀಸ್ ಠಾಣೆ ಸರಹದ್ದಿನಲ್ಲಿ ನಡೆದಿತ್ತು. ಕರೆಚಿತ್ತಪ್ಪ ಅಲಿಯಾಸ್ ಚಿತ್ತಪ್ಪ ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಈತನಿಗೆ ವಿವಾಹವಾಗಿ ಇಬ್ಬರು ಗಂಡು ಮಕ್ಕಳಿದ್ದರೂ ಸಹ, 15 ವರ್ಷದ ಬಾಲಕಿಯನ್ನು ಪ್ರೀತಿ ಪ್ರೇಮ ಎಂದು ಪುಸಲಾಯಿಸಿ ಆಕೆಯ ಜೊತೆಗೆ ಬಾಲ್ಯವಿವಾಹ ಮಾಡಿಕೊಂಡಿದ್ದು, ನಂತರ ಬೆಂಗಳೂರಿನಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಕುಣಿಗಲ್ ನ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಗುರುಪ್ರಸಾದ್ ವಿ.ಎಂ. ಅವರು ಘನ ನ್ಯಾಯಾಲಯಕ್ಕೆ ಪ್ರಕರಣ ಸಂಬಂಧ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಭಿಯೋಜನೆಯ ಪರ ವಿಚಾರ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ಮೇಲಿನ ಆರೋಪ ಸಾಬೀತಾದ ಕಾರಣ, ಅಪರಾಧಿ ಕರೆಚಿತ್ತಪ್ಪನಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಆಶಾ ಕೆ.ಎಸ್. ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q