ತುಮಕೂರು: ನಿನ್ನ ತಂದೆ– ತಾಯಿಗೆ ಅಪಘಾತವಾಗಿದೆ ಎಂದು ಹೇಳಿ, ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಸಂಬಂಧಿಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ ಪೋಕ್ಸೋ ನ್ಯಾಯಾಲವು ಅಪರಾಧಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 1 ಲಕ್ಷ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ದಿನಾಂಕ 24/06/21ರಂದು ರಾತ್ರಿ 1 ಗಂಟೆಯ ವೇಳೆಗೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಪೊಲೀಸ್ ಠಾಣಾ ಸರಹದ್ದಿನ ಹೊಯ್ಸಳ ಕಟ್ಟೆಯಲ್ಲಿ ಇರುವ ನೊಂದ ಬಾಲಕಿಯ ಮನೆಗೆ ಬಂದ ಅಪರಾಧಿ, ಬಾಲಕಿಯ ಸಂಬಂಧಿಕ ಸಯ್ಯದ್ ಸಾದತ್ ನಿನ್ನ ತಂದೆ ತಾಯಿಗೆ ಅಪಘಾತವಾಗಿದೆ ಎಂದು ನಂಬಿಸಿ ತನ್ನ ಇನ್ನೋವಾ ಕಾರಿನಲ್ಲಿ ಬಾಲಕಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಪಟ್ರೇಹಳ್ಳಿ ಗ್ರಾಮದ ಬಳಿ ಇರುವ ಫಾರೆಸ್ಟ್ ಸಮೀಪದ ಶ್ರೀ ತಂಗಮಲೈ ಮುರುಗನ್ ದೇವಸ್ಥಾನದ ಬಳಿಯ ಪ್ರವಾಸೋದ್ಯಮ ಇಲಾಖೆ ಯೋಜನೆಯಡಿಯಲ್ಲಿರುವ ತಂಗುದಾಣ ಕಟ್ಟಡದ ಮುಂಭಾಗದಲ್ಲಿ ನೊಂದ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಳಿಕ ಈ ವಿಚಾರ ಯಾರಿಗಾದರೂ ಹೇಳಿದರೆ, ಆ್ಯಸಿಡ್ ಎರಚಿ ಕೊಲೆ ಮಾಡುವುದಾಗಿ ಬೆದರಿಸಿದ್ದ. ಈ ಪ್ರಕರಣದ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯ ತನಿಖಾಧಿಕಾರಿಗಳಾದ ನಿರ್ಮಲ ವಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದ ವಿಚಾರಣೆಯಲ್ಲಿ ಸಯ್ಯದ್ ಸಾದತ್ ನ ಕೃತ್ಯ ರುಜುವಾತಾದ ಕಾರಣ ಘನ ನ್ಯಾಯಾಲಯವು ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷದ 50 ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದು, ಈ ದಂಡದಲ್ಲಿ ಬಾಲಕಿಗೆ 1 ಲಕ್ಷದ 45 ಸಾವಿರ ರೂಪಾಯಿ ಪರಿಹಾರವನ್ನು ನೀಡಬೇಕೆಂದು ತೀರ್ಪು ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ,ಎಸ್. ಅವರು ವಾದ ಮಂಡಿಸಿದರು.
ವರದಿ: ಶಿವಕುಮಾರ್, ಮೇಷ್ಟ್ರುಮನೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA