ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ತುಮಕೂರಿನ ಅಧಿಕ ಜಿಲ್ಲಾ ನ್ಯಾಯಾಲಯದ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯವು ಜೀವಾವಧಿ ಶಿಕ್ಷೆ(ಸಾಯುವರೆಗೂ) ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಸಂಕ್ರಾಂತಿ ದಿನ ನೊಂದ ಬಾಲಕಿ ರಂಗೋಲಿ ತರಲು ಸಮೀಪದ ಹಳ್ಳಿಗೆ ಹೋಗುತ್ತಿದ್ದ ವೇಳೆ ಪ್ರಕರಣದ ಅಪರಾಧಿ ಶ್ರೀರಾಮ್ ಎಂಬಾತ ಸ್ಕೂಟಿಯಲ್ಲಿ ಬಾಲಕಿಗೆ ಡ್ರಾಪ್ ಕೊಡುವುದಾಗಿ ಬಾಲಕಿಗೆ ಹೇಳಿದ್ದಾನೆ. ಬಾಲಕಿ ಬರುವುದಿಲ್ಲ ಎಂದರೂ ಆಕೆಯನ್ನು ಪುಸಲಾಯಿಸಿ ಹಳ್ಳಿಗೆ ಕರೆದೊಯ್ದು ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸಂಬಂಧ ತನಿಖಾಧಿಕಾರಿ ಗಿರೀಶ್, ಅಪರಾಧಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಶ್ರೀರಾಮನ ವಿರುದ್ಧದ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿ ಶ್ರೀರಾಮನಿಗೆ ಜೀವಾವಧಿ ಶಿಕ್ಷೆ(ಸಾಯುವವರೆಗೂ) ಹಾಗೂ 1.50 ಲಕ್ಷ ರೂ. ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 8 ಲಕ್ಷ ರೂ.ಗಳ ಪರಿಹಾರ ಸೇರಿದಂತೆ ಒಟ್ಟಾರೆ 9.50 ಲಕ್ಷ ರೂ. ಪರಿಹಾರವಾಗಿ ನೀಡಬೇಕೆಂದು ಆದೇಶಿಸಿ ತೀರ್ಪು ನೀಡಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ತನಿಖಾಧಿಕಾರಿಗಳ ವಿಚಾರಣೆಯನ್ನು ಸರ್ಕಾರಿ ಅಭಿಯೋಜಕರಾದ ಹನುಮಂತರಾಯ ತಳಕೇರಿ ನಡೆಸಿದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡನೆ ಮಾಡಿದರು.
ವರದಿ: ಶಿವಕುಮಾರ್ ಮೇಷ್ಟ್ರುಮನೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4