ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಾಗಿದೆ.
ಧಾರವಾಡದ ಕಲ್ಯಾಣನಗರ ನಿವಾಸಿ ರಾಮಾ ಕುಲಕರ್ಣಿ ಅವರು ಗೋಪಾಲ್ ಜೋಶಿ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 2022ರ ಮೇ 29ರಂದು ಧಾರವಾಡದ ಮಾಳಮಡ್ಡಿಯ ಪೂರ್ಣ ಅಪಾರ್ಟ್‌ಮೆಂಟ್ ನಲ್ಲಿರುವ ಫ್ಲ್ಯಾಟ್ ಗೆ ಭೇಟಿ ನೀಡಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಹಾಗೂ ಕಳೆದ ನಾಲ್ಕು ವರ್ಷಗಳಿಂದ ತಮಗೂ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಿರುಕುಳ ತಾಳಲಾರದೆ ಕುಟುಂಬ ಸದಸ್ಯರ ಸಲಹೆಯಂತೆ ಪೊಲೀಸ್ ಠಾಣೆ ಮೆಟ್ಟಿಲೇರಿರುವುದಾಗಿ ಅವರು ಹೇಳಿದ್ದಾರೆ.
ಇದೇ ವೇಳೆ ಗೋಪಾಲ್ ಜೋಶಿ ಅವರು ರಾಮಾ ಕುಲಕರ್ಣಿ ವಿರುದ್ಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು (Counter FIR) ದಾಖಲಿಸಿದ್ದಾರೆ.
ರಾಮಾ ಕುಲಕರ್ಣಿ ಅವರು ತಮ್ಮ ಮಾನಹಾನಿ ಮಾಡುವುದಾಗಿ ಬೆದರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡಲು ನಿರಾಕರಿಸಿದ್ದಕ್ಕೆ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ದೂರು ನೀಡಿದ್ದಾರೆ ಎಂದು ಗೋಪಾಲ್ ಜೋಶಿ ಆರೋಪಿಸಿದ್ದಾರೆ. ಪ್ರಸ್ತುತ ಎರಡು ದೂರುಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
