ಮುಧೋಳ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹಿನ್ನೆಲೆ ನಾಲ್ವರ ವಿರುದ್ದ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸುನೀಲ ಜಾನಪ್ಪಗೋಳ(23), ಮಂಜುನಾಥ ಮ್ಯಾಗೇರಿ(32), ಸಚೀನ ಮ್ಯಾಗೇರಿ (24), ರವಿಚಂದ್ರ ತಳಗೇರಿ (23) ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ತಾಲೂಕಿನ ಗ್ರಾಮವೊಂದರ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯಾಗಿದ್ದು, ಬಾಲಕಿ ಶೌಚಕ್ಕೆ ತೆರಳಿದ್ದ ವೇಳೆ ಆರೋಪಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ.
ನೊಂದ ಬಾಲಕಿಯನ್ನು ಪ್ರೀತಿಸು ಅಂತ ಗ್ರಾಮದ ಯುವಕ ಹಿಂದೆ ಬಿದ್ದಿದ್ದ. ಆದರೆ ಆಕೆ ನಿರಾಕರಿಸಿದ್ದಳು. ಆತನ ಕಾಟ ತಾಳಲಾರದೇ ಬಾಲಕಿ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದಳು. ಅಲ್ಲಿಗೂ ತೆರಳಿದ್ದ ಯುವಕ ತನ್ನ ಸ್ನೇಹಿತರ ನೆರವಿನೊಂದಿಗೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಒಬ್ಬ ಆರೋಪಿಯ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q