nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇಕ್ಸ್ಪಿಯರ್ ಸಾಹಿತ್ಯ ಕಾಲಾತೀತ: ಪ್ರೊ.ಓ.ಎಲ್.ನಾಗಭೂಷಣಸ್ವಾಮಿ
    ತುಮಕೂರು April 27, 2025

    ಶೇಕ್ಸ್ಪಿಯರ್ ಸಾಹಿತ್ಯ ಕಾಲಾತೀತ: ಪ್ರೊ.ಓ.ಎಲ್.ನಾಗಭೂಷಣಸ್ವಾಮಿ

    By adminApril 27, 2025No Comments2 Mins Read

    Provided by
    Provided by

    ತುಮಕೂರು: ಶೇಕ್ಸ್ಪಿಯರಿನ ಸಾಹಿತ್ಯವೆಲ್ಲವೂ ಜೀವನಾನುಭವದಿಂದ ರೂಪುಗೊಂಡವು. ಅವು ಕಾಲಾತೀತವಾದವು ಮತ್ತು ಪ್ರಾದೇಶಿಕ ಅಸ್ಮಿತೆಯನ್ನು ಉಳಿಸಿಕೊಂಡವು ಎಂದು ಖ್ಯಾತ ವಿಮರ್ಶಕ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಅಭಿಪ್ರಾಯಪಟ್ಟರು.

    ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಇಂಗ್ಲಿಷ್ ವಿಭಾಗವು ಹಮ್ಮಿಕೊಂಡಿದ್ದ ‘ಶೇಕ್ಸ್ಪಿಯರ್ ಸಾಹಿತ್ಯಕ್ಕೊಂದು ಪ್ರವೇಶ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶೇಕ್ಸ್ಪಿಯರ್‌ನ ಮೂವತ್ತೆಂಟು ನಾಟಕಗಳು ಕೇವಲ ಕಲ್ಪನೆಯ ಸೃಷ್ಟಿಗಳಲ್ಲ, ಇತಿಹಾಸ, ಓದು ಮತ್ತು ಅನುಭವದಿಂದ ರೂಪಿತವಾಗಿರುವವು ಎಂದರು.

    ಶೇಕ್ಸ್ಪಿಯರ್ ತನ್ನ ನಾಟಕದ ಪಾತ್ರಗಳನ್ನು ಮನುಷ್ಯ ಸಹಜ ಗುಣಗಳಿಂದ ರೂಪಿಸಿದ. ಪ್ರೀತಿ, ದ್ವೇಷ, ಅಸೂಯೆ, ಹೊಟ್ಟೆಕಿಚ್ಚು, ಸೇಡು ಇವುಗಳಿಂದ ತುಂಬಿ ಆ ಪಾತ್ರಗಳು ಜೀವಂತವಾಗಿ ನಮಗೆ ಕಾಣುತ್ತವೆ. ಜೂಲಿಯಸ್ ಸೀಸರ್‌ನಂತೆ ಅವಕಾಶ ಸಿಕ್ಕಿದಲ್ಲಿ ಸರ್ವಾಧಿಕಾರಿಯಾಗುವ ಲಕ್ಷಣವುಳ್ಳ, ಮ್ಯಾಕ್‌ಬೆತ್‌ನಂತೆ ಅಧಿಕಾರದ ಮಹತ್ವಾಕಾಂಕ್ಷೆ ಉಳ್ಳ, ಹ್ಯಾಮ್ಲೆಟ್‌ ನಂತೆ ನಿರ್ಧಾರ ತೆಗೆದುಕೊಳ್ಳಲು ಸದಾ ಹಿಂಜರಿಯುವ, ಕಿಂಗ್ ಲಿಯರ್‌ ನಂತೆ ಮಕ್ಕಳಿಗೆ ತನ್ನೆಲ್ಲಾ ಆಸ್ತಿಪಾಸ್ತಿ ಕೊಟ್ಟು ಬೀದಿಪಾಲಾಗುವ ಮನುಷ್ಯರು ಎಲ್ಲಾ ಕಾಲದಲ್ಲಿಯೂ ಇದ್ದರು ಮತ್ತು ಮುಂದೆಯೂ ಇರಲಿದ್ದಾರೆ ಎಂದು ವಿಶ್ಲೇಷಿಸಿದರು.

    ಶೇಕ್ಸ್ ಪಿಯರ್‌ ನ ಜೀವನಪಯಣದ ಕುರಿತಂತೆ ಸ್ಪಷ್ಟ ಮಾಹಿತಿ ಇಲ್ಲದಿರುವ ಕಾರಣ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ಲಭ್ಯ ದಾಖಲೆಗಳ ಪ್ರಕಾರ, ಶೇಕ್ಸ್ಪಿಯರ್ ಹೆಚ್ಚಿನ ಶಿಕ್ಷಣ ಪಡೆಯಲಾಗದಿದ್ದರೂ, ಅವನ ವೈಯಕ್ತಿಕ ನೋವು ನಲಿವುಗಳಿಂದ ಸಮ್ಮಿಲನಗೊಂಡ ಸಮೃದ್ಧ ಜೀವನಾನುಭವ ಅವನಿಂದ ಇಷ್ಟೊಂದು ಗಟ್ಟಿತನದ ಸಾಹಿತ್ಯ ರಚನೆ ಮಾಡಿಸಿತೆಂದು ನಾವು ಊಹಿಸಬಹುದು ಎಂದರು.


    Provided by
    Provided by

    ಬ್ರಿಟಿಷ್ ಸಾಮ್ರಾಜ್ಯ ವಿಶ್ವದಾದ್ಯಂತ ವಿಸ್ತರಿಸಿದ ರಾಜಕೀಯ ಕಾರಣದಿಂದ ಶೇಕ್ಸ್ಪಿಯರ್ ಸಾಹಿತ್ಯ ಇಷ್ಟೊಂದು ಪಸರಿಸಿತು ಎನ್ನುವುದು ಭಾಗಶಃ ಸತ್ಯ. ಈ ಕಾರಣದಿಂದ ಅವನ ಸಾಹಿತ್ಯದಲ್ಲಿರುವ ಹಿರಿಮೆಯನ್ನು ನಾವು ಅಲ್ಲಗಳೆಯುವಂತಿಲ್ಲ. ಇದು ನಮ್ಮ ಕನ್ನಡ ಭಾಷೆಗೂ ಅನ್ವಯಿಸಬಹುದು. ಒಂದು ಭಾಷೆ ಮತ್ತು ಅದರ ಸಾಹಿತ್ಯ ವಿಸ್ತರಿಸಬೇಕಾದರೆ ಅಧಿಕಾರದ ಬೆಂಬಲ ಬಹಳ ಪ್ರಮುಖ ಅಂಶ. ಕನ್ನಡಿಗರು ಬೆಳೆದರೆ ಕನ್ನಡ ಭಾಷೆಯೂ ಬೆಳೆಯುತ್ತದೆ ಎಂದರು.

    ವ್ಯಾಸರ ಮಹಾಭಾರತ, ಶೇಕ್ಸ್ಪಿಯರ್‌ ನ ಕನಿಷ್ಠ ಐದು ನಾಟಕ, ಟಾಲ್‌ ಸ್ಟಾಯ್‌ ನ ಕಾದಂಬರಿಗಳು ಮತ್ತು ದೊಸ್ತೋವಸ್ಕಿಯ ಕೃತಿಗಳನ್ನು ಎಲ್ಲ ಸಾಹಿತ್ಯಾಸಕ್ತ ವಿದ್ಯಾರ್ಥಿಗಳೂ ಓದಲೇಬೇಕು. ಇವು ನಮಗೆ ಸಮೃದ್ಧ ಜೀವನದರ್ಶನವನ್ನು ನೀಡುತ್ತವೆ ಎಂದರು.

    ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್ ಎಂ.ಶೇಟ್ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಜ್ಯೋತಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ…

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.